ಕೆ.ಎನ್.ಪಿ.ವಾರ್ತೆ,ರಾಮನಗರ,ಸೆ.04;

ಮಾಜಿ ಸಚಿವ ಡಿ ಕೆ ಶಿವಕುಮಾರ್‌ ರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಮನಗರ ಜಿಲ್ಲಾಧಿಕಾರಿ ಎಂ ಎಸ್‌ ಅರ್ಚನಾ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಡಿಕೆಶಿ ಅವರ ಬಂಧನದ ಹಿನ್ನಲೆಯಲ್ಲಿ ರಾಮನಗರ ಮತ್ತು ಜಿಲ್ಲೆಯ ಕನಕಪುರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಬಂಧನ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅಲ್ಲಲ್ಲಿ ಟೈರ್‌ ಗಳಿಗೆ ಬೆಂಕಿ ಹಚ್ಚಿದ ಪ್ರಕರಣವೂ ಬೆಳಕಿಗೆ ಬಂದಿದೆ.

ರಾಮನಗರ ಬಂದ್ ಗೆ ಕರೆ ನೀಡಿರುವ ಡಿಕೆಶಿ ಬೆಂಬಲಿಗರು ಹೆದ್ದಾರಿ ಬಂದ್ ಮಾಡಿ, ಕನಕಪುರ – ಮೈಸೂರು ಹೆದ್ದಾರಿಯಲ್ಲಿ ಟೈರ್‌ ಗಳಿಗೆ ಬೆಂಕಿ ಹಚ್ಚಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಹಲವು ಬಸ್ ಗಳಿಗೆ ಹಾನಿ ಮಾಡಲಾಗಿದೆ, ಈ ಸಂಬಂಧ ಕನಕಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.