ಕೆ.ಎನ್.ಪಿ.ವಾರ್ತೆ,ಮಡಿಕೇರಿ,ನ.03;

ಪತ್ನಿಯ ನಡತೆ ಸರಿಯಿಲ್ಲ ಎಂದು ಅನುಮಾನಗೊಂಡ ಪತಿಯೊಬ್ಬ ಆಕೆಗೆ ೩೦ಕ್ಕೂ ಅಧಿಕ ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ರಾತ್ರಿ ಮಡಿಕೇರಿಯಲ್ಲಿ ನಡೆದಿದೆ.

ಜುಬೈದ (೨೫) ಮೃತಪಟ್ಟ ಪತ್ನಿ. ಶರೀಫ್(೨೭) ಕೊಲೆ ಮಾಡಿದ ಆರೋಪಿ. ಏಳು ವರ್ಷದ ಹಿಂದೆ ಜುಬೈದಾ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಕೂಡ ಇದ್ದು, ನಡತೆ ಸರಿಯಲ್ಲ ಎಂಬ ವಿಚಾರಕ್ಕೆ ಪತಿ ಕಳೆದ ರಾತ್ರಿ ಪತ್ನಿಯೊಂದಿಗೆ ಜಗಳ ಮಾಡಿದ್ದಾನೆ.

ಜಗಳ ತಾರಕಕ್ಕೇರಿದ ಪರಿಣಾಮ ಆತ ಪತ್ನಿಯನ್ನು 30 ಬಾರಿ ಚಾಕುವಿನಿಂದ ಇರಿದಿದ್ದು, ತೀವ್ರರಕ್ತ ಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ. ಶನಿವಾರ ರಾತ್ರಿ 10.30ಕ್ಕೆ ಈ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶರೀಫ್ ನನ್ನು ವಶಕ್ಕೆ ಪಡೆದಿರುವ ಪೋಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.