ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.20;

ದುಬೈನಲ್ಲಿ ವಾಸವಾಗಿರುವ ಅನಿವಾಸಿ ಕನ್ನಡಿಗರು ನೀಡುವ ಕನ್ನಡ ರತ್ನ ಪ್ರಶಸ್ತಿಗೆ ಇನ್ಪೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಆಯ್ಕೆಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದುಬೈ ಕನ್ನಡಿಗರ ಮುಖ್ಯ ಸಂಚಾಲಕ ಮಲ್ಲಿಕಾರ್ಜುನ ಗೌಡ, ಕರ್ನಾಟಕದ ನಾಡ ಹಬ್ಬ ೬೪ ನೇ ‘ಕನ್ನಡ ರಾಜ್ಯೋತ್ಸವ’ ವನ್ನು ದುಬೈನಲ್ಲಿರುವ ಕನ್ನಡಿಗರು ಈ ಬಾರಿ ನವೆಂಬರ್ 08 ರಂದು ಆಚರಿಸುತ್ತಿದ್ದು, ಇದು 16ನೇ ದುಬೈ ಕನ್ನಡ ರಾಜ್ಯೋತ್ಸವವಾಗಿದೆ. 

ನವೆಂಬರ್ 08ರಂದು ಸಂಜೆ 4.30 ಗಂಟೆಗೆ ದುಬೈ ಮೇದಾನ್ ನಾದ್ ಅಲ್ ಶೀಬಾದಲ್ಲಿರುವ ಹಾರ್ಟ್ ಲ್ಯಾಂಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕನ್ನಡಿಗರು ಒಟ್ಟುಗೂಡಿ ನಾಡಹಬ್ಬ ಆಚರಿಸಲಿದ್ದು ಇದೇ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಗೆ 2019ನೇ ಸಾಲಿನ ‘ಕನ್ನಡ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.