ಕೆ.ಎನ್.ಪಿ.ವಾರ್ತೆ,ಕೋಲಾರ,ಸೆ.07;

ದ್ವಿಚಕ್ರ ವಾಹನವೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆಜಿಎಫ್ ಹೊರವಲಯದ ಕೋಡಿಯಪಲ್ಲಿ ಕುಪ್ಪಂ‌ರಸ್ತೆಯಲ್ಲಿ ಇಂದು ನಡೆದಿದೆ.

ವೆಂಕಟೇಶ್ (57 ) ಹಾಗೂ ಕನಕರಾಜ್ (27 ) ಮೃತಪಟ್ಟ ದುರ್ದೈವಿಗಳು. ವೆಂಕಟೇಶ್ ತಮ್ಮ ಹಿರಿಯ ಮಗ ರವಿಯ ಮದುವೆ ಆಮಂತ್ರಣ ನೀಡಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.