ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.11;

ಈ ಸಮ್ಮಿಶ್ರ ಸರ್ಕಾರವು ರಾಜ್ಯದಲ್ಲಿ ಯಾವುದೇ ಅಭಿವೃಧ್ಧಿ ಕಾರ್ಯಗಳನ್ನು ನಡೆಸುತ್ತಿಲ್ಲ. ಕೇವಲ ಸೀಟು ಹಂಚಿಕೆಯ ವಿಷಯದಲ್ಲಿ ಲಾಭಿ ನಡೆಸುತ್ತಿದ್ದಾರೆ. ಹಾಗೂ ಅಧಿಕಾರಿಗಳ ವರ್ಗಾವಣೆಯಲ್ಲಿ ನಿರತರಾಗಿದ್ದಾರೆ.

ರಾಜ್ಯದ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿಯಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಸಮ್ಮಿಶ್ರ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು.

ಇಂದು ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಗೆ ಆಗಮಿಸಿದ್ದ ಬಿಎಸ್‍ವೈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಮರೀಚಿಕೆಯಾಗಿವೆ. ಈಗಿನ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮರೆತು. ಕೇವಲ ಲಾಭಿ ನಡೆಸುವಲ್ಲಿ ನಿರತರಾಗಿದ್ದಾರೆ ಎಂದು ನುಡಿದರು.

ಪ್ರತ್ಯೇಕ ರಾಜ್ಯ : ಉತ್ತರ ಕರ್ನಾಟಕ ಪತ್ಯೇಕ ರಾಜ್ಯಕ್ಕಾಗಿ ನಮ್ಮ ಬೆಂಬಲವಿಲ್ಲ. ಅಖಂಡ ಕರ್ನಾಟಕದ ಅಭಿವೃಧ್ಧಿಯೇ ನಮ್ಮ ಗುರಿ ಎಂದು ಹೇಳಿದರು.

ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಸೋಲು :

ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ತಿಳಿದುಕೊಳ್ಳಲು ಕಾರ್ಯಕರ್ತರ ಸಭೆಗಳು ಹಾಗೂ ಮುಖಂಡರುಗಳ ಸಭೆಗಳನ್ನು ನಡೆಸಿ, ಚರ್ಚಿಸಿ ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಚುನಾವಣೆ ಎದುರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ, ಶೋಭ ಕರಂದ್ಲಾಜೆ, ಗೋವಿಂದ ಕಾರಜೋಳ ಸೇರಿದಂತೆ ಇತರ ಬಿಜೆಪಿಯ ಪ್ರಮುಖ ಮುಖಂಡರು, ಹಿರಿಯ ನಾಯಕರು ಹಾಜರಿದ್ದರು.

ವರದಿ : ಟಿ.ಗಣೇಶ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.