ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.21;

ರಾಜ್ಯ ಚುನಾವಣಾ ಆಯೋಗವು ಭಾನುವಾರ ದಾವಣಗೆರೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಿಸಿದ್ದು, ನವೆಂಬರ್ 12ರಂದು ಮತದಾನ ನಡೆಯಲಿದೆ.

ಎರಡು ಮಹಾನಗರ ಪಾಲಿಕೆ, ಆರು ನಗರ ಸಭೆ, ಮೂರು ಪುರಸಭೆ ಹಾಗೂ ಮೂರು ಪಟ್ಟಣ ಪಂಚಾಯತ್ ಸೇರಿದಂತೆ ಒಟ್ಟು 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕ ಪ್ರಕಟಿಸಲಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 20 ರಿಂದಲೇ ಆಯಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀತಿಸಂಹಿತೆ ಜಾರಿಗೊಳಿಸಲಾಗಿದೆ.

ದಾವಣಗೆರೆಯ 45 ಹಾಗೂ ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್ ಗಳಿಗೆ ನ.12ರಂದು ನಡೆಯಲಿರುವ ಚುನಾವಣೆಗೆ ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ನ. 2ರಂದು ನಾಮಪತ್ರ ಪರಿಶೀಲಿಸಲಾಗುವುದು ಹಾಗೂ ನಾಮಪತ್ರ ವಾಪಸ್ ಪಡೆಯಲು ನವಂಬರ್ 4 ಕೊನೆಯ ದಿನವಾಗಿದೆ. ನವಂಬರ್ 12 ರಂದು ಮತದಾನ ನಡೆಯಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತಚಲಾಯಿಸಲು ಸಮಯ ನಿಗದಿಪಡಿಸಲಾಗಿದೆ. ನವಂಬರ್ 14 ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಇನ್ನು ಚಾಮರಾಜನಗರ ಜಿಲ್ಲಾ ಪಂಚಾಯತ್ ಸೇರಿದಂತೆ ಚಾಮರಾಜನಗರ, ಉಡುಪಿ, ಗದಗ ಹಾಗೂ ಕೊಪ್ಪಳದ ತಾಲೂಕು ಪಂಚಾಯತ್ ಹಾಗೂ ಗ್ರಾಮಪಂಚಾಯತ್‌ಗಳಲ್ಲಿ ತೆರವುಗೊಂಡಿರುವ 213 ಸದಸ್ಯ ಸ್ಥಾನಗಳಿಗೂ ಉಪ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನವಂಬರ್ 12 ರಂದು ಮತದಾನ ನಡೆಯಲಿದ್ದು 14 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.