ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಡಿ.10;

ಇಂದಿನಿಂದ 10 ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧ ಸಜ್ಜಾಗಿದೆ. ಮೊದಲ ದಿನ ಪ್ರತಿಪಕ್ಷ ಬಿಜೆಪಿ ಬೃಹತ್ ರೈತ ಸಮಾವೇಶ ಆಯೋಜನೆ ಮಾಡಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನದ ಭದ್ರತೆಗಾಗಿ 4 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ವಿಧಾಸನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರ ಆಶಯದಂತೆ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಧಿವೇಶನದ ಖರ್ಚು ವೆಚ್ಚಗಳು ಪಾರದರ್ಶಕರಾಗಿರಬೇಕು. ಸರ್ಕಾರದ ಹಣ ದುರುಪಯೋಗವಾಗಬಾರದು ಎಂಬ ಉದ್ದೇಶದಿಂದ ಇದೇ ಮೊದಲ ಬಾರಿಗೆ ಐಎಎಸ್ ಅಧಿಕಾರಿ ಉಜ್ಜಲ್ ಕುಮಾರ್ ಘೋಷ್ ಅವರನ್ನು ವಿಶೇಷ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಅಧಿವೇಶನದ ಮೊದಲ ದಿನವಾದ ಇಂದು ಹಲವು ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ಕಬ್ಬು ಬೆಳೆಗಾರರು, ಉತ್ತರ ಕರ್ನಾಟಕದ ವಿವಿಧ ಮಠಾಧೀಶರು ಸರ್ಕಾರದ ವಿರುದ್ಧ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ನಾಯಕರು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

ಅಧಿವೇಶನದಲ್ಲಿ ಭಾಗವಹಿಸುವ ಶಾಸಕರಿಗೆ ಈ ಬಾರಿ ಕೇವಲ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗಿನ ಉಪಹಾರ ಮತ್ತು ರಾತ್ರಿ ಊಟವನ್ನು ಶಾಸಕರು ತಮಗೆ ಸಿಗುವ ಭತ್ಯೆಯಲ್ಲಿಯೇ ಸೇವಿಸಬೇಕು. ತಮ್ಮ ಪಿಎ, ಗನ್‌ಮ್ಯಾನ್, ಡ್ರೈವರ್‌ಗಳ ಊಟಕ್ಕೆ ಶಾಸಕರೇ ವೆಚ್ಚ ಭರಿಸಬೇಕು. ಶಾಸಕರಿಗೆ ಮಾತ್ರ ರೂಂ ವ್ಯವಸ್ಥೆ ಮಾಡಲಾಗಿದೆ.

ಐದು ಸಾವಿರ ಅಧಿಕಾರಿಗಳು, ಶಾಸಕರು, ಪತ್ರಕರ್ತರಿಗೆ ಮಾತ್ರ ಊಟ, ವಸತಿ, ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗಾವಿಯಲ್ಲಿ ನಡೆಯುವ 10 ದಿನದ ಅಧಿವೇಶನಕ್ಕೆ 17.57 ಕೋಟಿ ರೂ. ವೆಚ್ಚ ನಿಗದಿ ಮಾಡಲಾಗಿದೆ. ಭದ್ರತೆಗೆ ನಿಯೋಜನೆಗೊಳ್ಳುವ ಪೊಲೀಸರಿಗೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಿಕೊಡಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.