ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.05;

ಜಮ್ಮು ಮತ್ತು ಕಾಶ್ಮೀರ ವಿಚಾರವಾಗಿ ನಡೆಯುತ್ತಿರುವ ಶೀಥಲಸಮರ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.

ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ದೆಹಲಿ ನಿವಾಸದಲ್ಲಿ ಸಭೆ ನಡೆಯಲಿದ್ದು, ಸಭೆಗೆ ಕೇಂದ್ರ ಸಚಿವರು ಮಾತ್ರವಲ್ಲದೆ ರಕ್ಷಣೆ ಮತ್ತು ಗೃಹ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳು ಭಾಗಿಯಾಗಲಿದ್ದಾರೆ. 

ಇನ್ನು ಸಂಸತ್‌ ಅಧಿವೇಶನದಲ್ಲಿ ಕಾಶ್ಮೀರ ವಿಚಾರ ಚರ್ಚೆಯಾಗುವ ಸಾಧ್ಯತೆ ಇದೆ. ಕಲಾಪ ಆರಂಭವಾಗುವುದಕ್ಕೆ ಮೊದಲೇ ಸಂಪುಟ ಸಭೆ ನಡೆಯಲಿದೆ. ಅಮರನಾಥ ಯಾತ್ರೆಯನ್ನು ರದ್ದು ಮಾಡಿ, ಪ್ರವಾಸಿಗರೆಲ್ಲರೂ ಕಾಶ್ಮೀರ ಬಿಟ್ಟು ಹೋಗಬೇಕು ಎಂದು ಸರ್ಕಾರ ಕಳೆದ ವಾರ ಆದೇಶ ಕೊಟ್ಟಿದೆ. ಜತೆಗೆ ರಾಜ್ಯದಲ್ಲಿ ಭಾರಿ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಲಾಗಿದೆ.

ಕಾಶ್ಮೀರ ನೀತಿಯಲ್ಲಿ ಬದಲಾವಣೆ ಇಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ ಮಲಿಕ್‌ ಸ್ಪಷ್ಟನೆ ನೀಡಿದ್ದಾರೆ. ಆದರೂ, ಕಾಶ್ಮೀರದಲ್ಲಿ ವಿವಿಧ ರೀತಿಯ ವದಂತಿ ಹರಿದಾಡುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅಥವಾ ಶಾ ಅವರು ಮೌನ ಮುರಿದಿಲ್ಲ. ಹೀಗಾಗಿ ಇಂದು ನಡೆಯಲಿರುವ ಸಂಪುಟ ಸಭೆ ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡುವ ಸಾಧ್ಯತೆ ಇದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.