ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.26;

ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿರುವ ಮೂವರು ಶಾಸಕರು ಇಂದು ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.

ಈಗಾಗಲೇ ಕಾನೂನು ತಜ್ಞರೊಂದಿಗೆ ಅರ್ಜಿ ಕೋರ್ಟ್ ಮೆಟ್ಟಿಲೇರುವ ಬಗ್ಗೆ ಚರ್ಚೆ ನಡೆದಿದ್ದು, ತುರ್ತು ವಿಚಾರಣೆ ಕೋರಿ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.

ಅನರ್ಹತೆಗೆ ತಾತ್ಕಾಲಿಕ ತಡೆ ನೀಡುವಂತೆ ಸುಪ್ರೀಂಕೋರ್ಟ್ ಮುಂದೆ ಶುಕ್ರವಾರ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಆರ್ ಶಂಕರ್ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶಾಸಕರ ವಿಚಾರಣೆ ನಡೆಸದೆ ಅನರ್ಹತೆ ಕ್ರಮ ಕೈಗೊಳ್ಳಲಾಗಿದೆ. ವಿಚಾರಣೆಗಾಗಿ ಶಾಸಕರಿಗೆ ಸೂಕ್ತ ಸಮಯ ನೀಡಲಾಗಿಲ್ಲ, ಇದರಿಂದ ಶಾಸಕರ ಸಹಜ ನ್ಯಾಯ ಧಕ್ಕೆಯಾಗಿದೆ.

ರಾಜೀನಾಮೆ ನೀಡಿರುವ ಶಾಸಕರ ಮೇಲೆ ಒತ್ತಡ ಹೇರುವಂತಿಲ್ಲ ಹಾಗೂ ವಿಪ್ ಹೊರಡಿಸಿ ಶಾಸಕರ ಮೇಲೆ ಒತ್ತಡ ಹೇರುವಂತಿಲ್ಲ ಎಂಬ ಆದೇಶವನ್ನು ಸ್ಪೀಕರ್ ಹಾಗೂ ಶಾಸಕಾಂಗ ಪಕ್ಷದ ನಾಯಕರು ಉಲ್ಲಂಘಿಸಿದ್ದಾರೆ. ಇದರಿಂದ ಶಾಸಕರ ಅನರ್ಹತೆ ಕ್ರಮ ಕಾನೂನು ಬಾಹಿರ ಹಾಗೂ ನ್ಯಾಯಾಂಗ ನಿಂದನೆ ಎನ್ನುವುದು ಮೂವರು ಶಾಸಕರ ವಾದವಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.