ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.25;

ಕರ್ನಾಟಕಾದ್ಯಂತ ಇನ್ನೆರೆಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಂದು ವಾರದಿಂದ ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ, ಮಲೆನಾಡು, ಉತ್ತರ ಕನ್ನಡ ಭಾಗಗಳಲ್ಲಿ ಮಳೆಯಾಗುತ್ತಿತ್ತು. ಆದರೆ ಬುಧವಾರದಿಂದ ಉತ್ತರ ಕರ್ನಾಟಕ ಭಾಗಗಳಲ್ಲೂ ಅತಿ ಹೆಚ್ಚು ಮಳೆಯಾಗಿದ್ದು, ಬಾಗಲಕೋಟೆ, ಗದಗ, ವಿಜಯಪುರದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ.

ಉತ್ತರ ಕನ್ನಡ, ಬೆಂಗಳೂರು, ರಾಯಚೂರು, ಯಾದಗಿರಿ, ಕೊಡಗು, ಮಂಡ್ಯ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ, ರಾಮನಗರದಲ್ಲಿ ಸಾಮಾನ್ಯ ಮಳೆಯಾಗಿದೆ. ಬಳ್ಳಾರಿಯಲ್ಲಿ ಅತಿ ಕಡಿಮೆ ಮಳೆಯಾಗಿದೆ.

ಶಿರಾಲಿ, ಕಾರವಾರ, ಹೊನ್ನಾವರದಲ್ಲಿ 10 ಸೆಂ.ಮೀ, ಕೋಟಾ, ಭಟ್ಕಳ, ಗೋಕರ್ಣದಲ್ಲಿ 9 ಸೆಂ.ಮೀ, ಉಡುಪಿ, ಗೇರುಸೊಪ್ಪ, ಮಂಗಳೂರು, ಕುಂದಾಪುರ, ಸಿದ್ದಾಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕಾದ್ಯಂತ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ.

ಮಹಾರಾಷ್ಟ್ರದಿಂದ ಇದೀಗ ಕರ್ನಾಟಕಕ್ಕೂ ಭಾರಿ ಮಳೆಯ ಆಗಮನವಾಗಲಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ನಿರ್ಮಾಣವಾಗಿದ್ದು, ಸಮುದ್ರದ ಮಟ್ಟಕ್ಕಿಂತ 7.6 ಕಿ.ಮೀ ಎತ್ತರದಲ್ಲಿ ಸೈಕ್ಲೋನ್ ಸರ್ಕ್ಯುಲೇಷನ್ ಏರ್ಪಟ್ಟಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.