ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.23;

ಮಹಾರಾಷ್ಟ್ರ ರಾಜಕೀಯ ಬೃಹನ್ನಾಟಕಕ್ಕೆ ತೆರೆ ಬಿದ್ದಿದ್ದು, ರಾತ್ರೋರಾತ್ರಿ ನಡೆದ ರಾಜಕೀಯ ಬೆಳವಣಿಗೆ ನಂತರ ಶನಿವಾರ ಬೆಳಗ್ಗೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ನೇತೃತ್ವದ ಸರ್ಕಾರ ರಚನೆಯಾಗಿದೆ. ಇದರಿಂದಾಗಿ 10 ದಿನಗಳ ಹಿಂದೆ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತ ಹೇರಿಕೆಯನ್ನು ಇಂದು ಬೆಳಗ್ಗೆ 5.47ಕ್ಕೆ ಹಿಂಪಡೆಯಲಾಗಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೃಹ ಸಚಿವಾಲಯಕ್ಕೆ ಅಧಿಸೂಚನೆ ಹೊರಡಿಸಿದ್ದು ರಾಷ್ಟ್ರಪತಿ ಆಡಳಿತವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಬಲ್ಲಾ ಇಂದು ಬೆಳಗ್ಗೆ 5.47ಕ್ಕೆ ಹೊರಡಿಸಿದ್ದಾರೆ.

ರಾಷ್ಟ್ರಪತಿ ಆಡಳಿತ ಹೇರಿಕೆ ಹಿಂಪಡೆದ ನಂತರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು.

ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.