ಕೆ.ಎನ್.ಪಿ.ವಾರ್ತೆ,ಬೆಳಗಾವಿ,ನ.20;

ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಬುಧವಾರ ನಸುಕಿನ ಜಾವ ನಿಧನರಾಗಿದ್ದಾರೆ.

ಕೆಲಕಾಲದಿಂದ ಅನಾರೋಗ್ಯಪೀಡಿತರಾಗಿದ್ದ ಶಂಕರ ಮುನವಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸಾಕಷ್ಟು ಕಾನೂನು ತಿಳುವಳಿಕೆ ಹೊಂದಿದ್ದ ಮುನವಳ್ಳಿ ತಮ್ಮ ಹರಿತವಾದ ಮಾತುಗಳಿಂದ ಅನೇಕ ರಾಜಕೀಯ ನಾಯಕರ ನಿದ್ದೆಗೆಡಿಸಿದ್ದರು.

ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ನಿಷ್ಠಾವಂತ ಸೇವೆ ಸಲ್ಲಿಸಿದ್ದ ಅವರು ಪಕ್ಷದಲ್ಲಿ ಅನ್ಯಾಯವಾದಾಗ ತಮ್ಮದೇ ಪಕ್ಷದ ನಾಯಕರನ್ನು ಬಹಿರಂಗವಾಗಿ ಟೀಕಿಸಿ ಗಮನಸೆಳೆಯುತ್ತಿದ್ದರು. 

ಎಂಭತ್ತರ ದಶಕದ ಆರಂಭದಲ್ಲಿ ದಿ.ಎ.ಕೆ.ಸುಬ್ಬಯ್ಯ ಅವರು ,ಬಿಜೆಪಿ ಯಿಂದ ಉಚ್ಛಾಟಿಸಲ್ಪಟ್ಟ ನಂತರ, ಕಟ್ಟಿದ ” ಕನ್ನಡ ನಾಡು” ಪ್ರಾದೇಶಿಕ ಪಕ್ಷದಲ್ಲಿ ಗುರುತಿಸಿಕೊಂಡ ಶಂಕರ ಮುನವಳ್ಳಿ ನಂತರ ಕಾಂಗ್ರೆಸ್ ಪಕ್ಷದತ್ತ ಮುಖಮಾಡಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.