ಕೆ.ಎನ್.ಪಿ.ವಾರ್ತೆ,ಕಲಬುರ್ಗಿ,ನ.02;

ಮಾಜಿ ಸಚಿವ ವೈಜನಾಥ ಪಾಟೀಲ್ (82) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೈಜನಾಥ ಪಾಟೀಲ್ ರನ್ನು ಒಂದು ವಾರದ ಹಿಂದೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಇಂದು ಬೆಳಗ್ಗೆ ಆರು ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದು, ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಚಿಂಚೋಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತ ವೈಜನಾಥ ಅವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೂಲತಃ ಬೀದರ್ ಜಿಲ್ಲೆಯವರಾದ ವೈಜನಾಥರು ಕಲಬುರ್ಗಿ ಜಿಲ್ಲೆಯ ಚಿಂಚೋಳಿಯಲ್ಲಿ ನೆಲೆಸಿದ್ದರು. ಅಲ್ಲಿಂದಲೇ ಶಾಸಕರಾಗಿ ಎರಡು ಬಾರಿ ಆಯ್ಕೆಯಾಗಿದ್ದರು. ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ (1984) ತೋಟಗಾರಿಕೆ ಸಚಿವರಾಗಿ ಹಾಗೂ ಎಚ್.ಡಿ.ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ (1994) ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಕಲ್ಯಾಣ ಕರ್ನಾಟಕಕ್ಕೆ ಶ್ರಮಿಸಿದ್ದ ವೈಜನಾಥ ಪಾಟೀಲ್

ಕಲ್ಯಾಣ ಕರ್ನಾಟಕ ಎಂದು ಕರೆಯಲಾಗುವ ರಾಜ್ಯದ ಅತಿ ಹಿಂದುಳಿದ ಪ್ರದೇಶವಾದ ಹೈದರಾಬಾದ್‌ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗಾಗಿ ಪಾಟೀಲರು ಶ್ರಮಿಸಿದ್ದರು. 371ಜೆ ವಿಧಿ ಜಾರಿಗಾಗಿ ಅವಿರತವಾಗಿ ಹೋರಾಡಿದ್ದರು. ಈ ಭಾಗದ ಜನರಿಗೆ ಹಲವು ಅನುಕೂಲ ಕಲ್ಪಿಸುವ ಮತ್ತು ಅಲ್ಲಿನ ಅಭಿವೃದ್ಧಿಗೆ ಅವಕಾಶ ಮಾಡಿಕೊಡುವ 371ಜೆ ವಿಧಿ ಜಾರಿಗೆ 20 ವರ್ಷಗಳಷ್ಟು ಹಿಂದೆಯೇ ಒತ್ತಾಯಿಸಿ, ಹೋರಾಟ ರೂಪಿಸಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.