ಕೆ.ಎನ್.ಪಿ.ವಾರ್ತೆ,ಗದಗ,ಡಿ.26;

ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರರ ಜತೆಗಿನ ಹೋರಾಟದ ವೇಳೆ ಗದಗ ಜಿಲ್ಲೆಯ ಯೋಧ ಹುತಾತ್ಮರಾಗಿದ್ದಾರೆ. ಗುರುವಾರ ಜಮ್ಮು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಕಾಳಗದ ವೇಳೆ ಗದಗದ ವೀರೇಶ್​ ಕುರತ್ತಿ (50) ಎಂಬ ಯೋಧ ಹುತಾತ್ಮರಾಗಿದ್ದಾರೆ.

ವೀರೇಶ್ ಮೂಲತಃ ಗದಗದ ಹೊಳೆಯಾಲೂರು ಸಮೀಪದ ಕರಮುಡಿ ಗ್ರಾಮದವರಾಗಿದ್ದು ಕಳೆದ 30 ವರ್ಷದಿಂದ ಭಾರತೀಯ ಸೇನೆ 18ನೇ ಮರಾಠ ಬೆಟಾಲಿಯನ್‍ನಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ರಾಮಾಪುರ್ ಮತ್ತು ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ಮತ್ತು ಭಯೋತ್ಪಾದಕರ ಗುಂಡಿನ ದಾಳಿ ನಡೆದಿದ್ದು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ವೀರೇಶ್ ವೀರ ಮರಣ ಹೊಂದಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.