ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜೂ.09;
ನಗರದ ಕೋರ್ಟ್ ಆವರಣದಲ್ಲಿ ಜೂ.12ರಂದು ಬೆಳಿಗ್ಗೆ 9ಗಂಟೆಗೆ ‘ಅಂತರರಾಷ್ಟ್ರೀಯ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆ’ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.
ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು, ನ್ಯಾಯಾಧೀಶೆ ಶ್ರೀಮತಿ ಜಿ ಅನಿತಾ ಹಾಗೂ ಕಾನೂನು ಸೇವಾ ಸಮಿತಿಯ ಪದಾಧಿಕಾರಿಗಳು ಮತ್ತು ಸಂಘದ ವಕೀಲರ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆಯ ನಿಮಿತ್ತ ಪ್ರಮುಖ ಬೀದಿಗಳಲ್ಲಿ ಜನಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಸರ್ವ ವಕೀಲ ಸದಸ್ಯರು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಗಂಗಾವತಿ ವಕೀಲರ ಸಂಘದ ಖಜಾಂಚಿ ಹಾಗೂ ವಕೀಲರಾದ ಹೆಚ್.ಎಂ.ಮಂಜುನಾಥ ಪ್ರಕಟಣೆಯಲ್ಲಿ ಕೋರಿದ್ದಾರೆ.
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
9513326661
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.