ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.28;

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನು ಬೆಂಬಲಿಸಿ ಖ್ಯಾತ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಒಂದು ಪುಟದ ಪತ್ರ ಬರೆದಿರುವ ಪ್ರಾಣೇಶ್, ಡಿವಿಜಿ ಅವರ ‘ಹುಲ್ಲಾಗು ಬೆಟ್ಟದಡಿ’ ಎಂಬ ಕಗ್ಗವನ್ನು ಪ್ರಸ್ತಾಪಿಸಿದ್ದಾರೆ. ‘18 ವರ್ಷದ ಗುಜರಾತ್ ಮಾದರಿ ಮುಂದಿಟ್ಟುಕೊಂಡು ಆಡಳಿತ ನಡೆಸುತ್ತಿದ್ದೀರಿ. ಸಿಎಎ ಅಖಂಡ ಭಾರತದ ಪರಿಕಲ್ಪನೆಗೆ ಸಾಕ್ಷಿಯಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಡಿ.27 ರಂದು ಪತ್ರವನ್ನು ಕಳಿಸಿಕೊಟ್ಟಿರುವ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕೈಗೊಳ್ಳುತ್ತಿರುವ ಕ್ರಮಗಳನ್ನು ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಭಾರತದಲ್ಲಿದ್ದುಕೊಂಡು ಭಾರತಕ್ಕೆ ಎರಡು ಬಗೆಯುವ ಶಕ್ತಿಗಳಿಗೆ ಮೋದಿ ಅವರು ದುಸ್ವಪ್ನರಾಗಿದ್ದಾರೆ. ದೇಶದ ಭದ್ರತೆಗೆ ಇನ್ನಷ್ಟು ಕ್ರಮ ಕೈಗೊಳ್ಳಲಿ. ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ತಂದಿರುವುದು ಅತ್ಯಂತ ಸೂಕ್ತವಾಗಿದೆ ಎಂದಿದ್ದಾರೆ.

ವಿವಾದಿತ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ಸಂಸತ್ ನಲ್ಲಿ ಅನುಮೋದನೆ ಪಡೆದುಕೊಂಡು ಕಾನೂನಾಗಿದೆ. ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಬಿಜೆಪಿ ಕೂಡ ವ್ಯಾಪಕವಾಗಿ ಇದರ ಕುರಿತು ಜನಜಾಗೃತಿ ಮಾಡುತ್ತಿದೆ. ಈಶಾನ್ಯ ಭಾರತದಲ್ಲಿ ಹಾಗೂ ದೆಹಲಿಯಲ್ಲಿ ಹಿಂಸಾಚಾರಗಳು ನಡೆಯುತ್ತಿವೆ. ಪ್ರತಿಭಟನೆ ಈಶಾನ್ಯ ರಾಜ್ಯಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.