ಕೆ.ಎನ್.ಪಿ.ವಾರ್ತೆ,ಶ್ರೀನಗರ,ಅ.31;

ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಗವರ್ನರ್ ಆಗಿ ಗುರುವಾರ ರಾಧಾ ಕೃಷ್ಣ ಮಾಥೂರ್ ಪ್ರಮಾಣವಚನ ಸ್ವೀಕರಿಸಿದರು. 

ಜಮ್ಮು-ಕಾಶ್ಮೀರ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ಗೀತಾ ಮಿತ್ತಲ್, ಮಾಥೂರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಲೇಹ್ ನಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ಬೋಧನೆ ನಡೆಯಿತು.

ಇನ್ನೊಂದೆಡೆ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅಧಿಕಾರ ವಹಿಸಿಕೊಂಡರು. ದಶಕಗಳ ಕಾಲ ಜಮ್ಮು -ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ಸುಮಾರು 3 ತಿಂಗಳ ನಂತರ ಜಮ್ಮು ಮತ್ತು ಕಾಶ್ಮೀರ ಎಂದು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ರಚಿಸಲಾಗಿದೆ. ಇದುವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರನ್ನು ಗೋವಾ ರಾಜ್ಯಪಾಲರಾಗಿ ವರ್ಗಾಯಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.