ಕೆ.ಎನ್.ಪಿ.ವಾರ್ತೆ,ಗಜೇಂದ್ರಗಡ,ಜೂ.11;

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ಅಗಲಿಕೆ ಕನ್ನಡ ನಾಡಿಗೆ ಬಹುದೊಡ್ಡ ನಷ್ಟವಾಗಿದೆ ಎಂದು ಪಿಯು ಪ್ರಾಚಾರ್ಯ ಬಸವರಾಜ ಚಿನಿವಾಲರ ಕಂಬನಿ ಮಿಡಿದರು.

ಗಿರೀಶ್ ಕಾರ್ನಾಡ್ ನಿಧನಕ್ಕೆ ಪಟ್ಟಣದ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯರು, ಗಿರೀಶ್ ಕಾರ್ನಾಡ್ ರು ಬಹು ಆಯಾಮಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯಾಗಿದ್ದರು.

ಇತಿಹಾಸ, ಪುರಾಣ ಕಥೆಗಳನ್ನು ಆಧರಿಸಿ ಬರೆದ ನಾಟಕಗಳು ಇಂದಿನ ವಸ್ತುಸ್ಥಿತಿಯನ್ನು ವಿಶ್ಲೇಷಿಸುವ ರೀತಿ ಅಪೂರ್ವವಾದುದು. ಅವರ ನಾಟಕಗಳು ದೇಶ- ವಿದೇಶದ ಹಲವು ಭಾಷೆಗಳಿಗೆ ಅನುವಾದಗೊಂಡು ಪ್ರದರ್ಶನಗೊಂಡವು.

ಆ ಮೂಲಕ ಕನ್ನಡ ಸಂಸ್ಕೃತಿಯ ಕಂಪನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಿದ ಕೀರ್ತಿ ಅವರದು ಎಂದು ಸ್ಮರಿಸಿದ್ದಾರೆ. ಜ್ಞಾನಪೀಠ, ಪದ್ಮಶ್ರೀ ಸೇರಿದಂತೆ ಅನೇಕ ಪುರಸ್ಕಾರಗಳನ್ನು ಪಡೆದಿದ್ದಾರೆ. ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿರುವ ಅವರು ನೇರ ನುಡಿಯ ವಾಗ್ಮಿಯಾಗಿದ್ದರು ಎಂದು ಹೇಳಿದರು.

ಪದವಿ ಪ್ರಾಚಾರ್ಯ ಬಸಯ್ಯ ಹಿರೇಮಠ ಮಾತನಾಡಿ, ಚಲನಚಿತ್ರರಂಗದಲ್ಲಿ ನಟನೆ ಹಾಗೂ ನಿರ್ದೇಶನದಲ್ಲಿ ತಮ್ಮದೇ ಛಾಪು ಮೂಡಿಸಿದರು. ನಾಡಿನ ಸಾಂಸ್ಕೃತಿಕ ವಲಯಕ್ಕೆ ಹೊಸ ಹೊಳಪು ನೀಡಿದ ಅಗಾಧ ಪ್ರತಿಭೆಯನ್ನು ನಾವು ಇಂದು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದರು.

ವಸಂತರಾವ ಗಾರಗಿ, ಸಂಗಮೇಶ ಬಾಗೂರ, ಗೋಪಾಲ ರಾಯಬಾಗಿ, ಸಂಗಮೇಶ ವಸ್ತ್ರದ, ಕವಿತಾ ಕವಲೂರ, ಬಾಲಚಂದ್ರ ವಾಲ್ಮೀಕಿ, ಅನುಪಮಾ ಮೂಡಬಿದರಿ, ಆರ್.ಪಿ.ಹೊಳಗಿ, ರಸೂಲ ಚಾಮಲಾಪುರ, ಎಸ್.ಬಿ.ಕರಬಾಶೆಟ್ಟಿ, ಎ.ಎಸ್.ಜೂಚನಿ, ಸಾಂತಯ್ಯ ಬೆಳವಣಕಿಮಠ, ಪ್ರಶಾಂತ ಗಾಳಪೂಜಿಮಠ, ಪ್ರಮೋದ ಅಬ್ಬಿಗೇರಿ, ಶಿವಕುಮಾರ ಹಿರೇಮಠ, ಶಿವಾನಂದ ಹಳ್ಳದ ಇದ್ದರು.

ವರದಿ : ಚಂದ್ರು ರಾಥೋಡ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.