ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.10;

ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಗಿರೀಶ್‌ ಕಾರ್ನಾಡ್‌ ಅವರು ಇತಿಹಾಸ, ಪುರಾಣ ಕಥೆಗಳನ್ನು ಆಧರಿಸಿ ಬರೆದ ನಾಟಕಗಳು ಇಂದಿನ ವಸ್ತುಸ್ಥಿತಿಯನ್ನು ವಿಶ್ಲೇಷಿಸುವ ರೀತಿ ಅಪೂರ್ವವಾದುದು. ಅವರ ನಾಟಕಗಳು ದೇಶ- ವಿದೇಶದ ಹಲವು ಭಾಷೆಗಳಿಗೆ ಅನುವಾದಗೊಂಡು ಪ್ರದರ್ಶನಗೊಂಡವು. ಆ ಮೂಲಕ ಕನ್ನಡ ಸಂಸ್ಕೃತಿಯ ಕಂಪನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಿದ ಕೀರ್ತಿ ಅವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಚಲನಚಿತ್ರರಂಗದಲ್ಲಿ ನಟನೆ ಹಾಗೂ ನಿರ್ದೇಶನದಲ್ಲಿ ತಮ್ಮದೇ ಛಾಪು ಮೂಡಿಸಿದರು. ನಾಡಿನ ಸಾಂಸ್ಕೃತಿಕ ವಲಯಕ್ಕೆ ಹೊಸ ಹೊಳಪು ನೀಡಿದ ಅಗಾಧ ಪ್ರತಿಭೆಯನ್ನು ನಾವು ಇಂದು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ ಎಂದು ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.