ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.18;

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ (ಜಿಕೆವಿಕೆ) ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಪ್ರಸನ್ನ ತ್ರಿಪಾಠಿ (25) ಆತ್ಮಹತ್ಯೆಗೆ ಶರಣಾದವರು. ತ್ರಿಪಾಠಿ ಜಿಕೆವಿಕೆಯಲ್ಲಿ ಡಾಕ್ಟರೇಟ್ ಸಂಶೋಧನಾ ವಿದ್ಯಾರ್ಥಿಯಾಗಿದ್ದರು. ಕೊಡಿಗೆಹಳ್ಳಿಯ ಕೆನರಾ ಬ್ಯಾಂಕ್‌ ಲೇಔಟ್‌ನ ಮಾರುತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ಸಹಪಾಠಿ ತಮಿಳುನಾಡಿನ ಡಾಕ್ಟರೇಟ್ ವಿದ್ಯಾರ್ಥಿಯೊಂದಿಗೆ ಒಟ್ಟಾಗಿ ನೆಲೆಸಿದ್ದರು. ಗೆಳೆಯ ಮೂರು ದಿನಗಳ ಹಿಂದೆ ಊರಿಗೆ ಹೋಗಿದ್ದರು.

ಕಾಲೇಜಿಗೆ ರಜೆ ಇದ್ದ ಕಾರಣ ಮನೆಯಲ್ಲೇ ಉಳಿದಿದ್ದ ಪ್ರಸನ್ನ ರಾತ್ರಿ ಹತ್ತು ಗಂಟೆ ಸುಮಾರಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಹಜೀವನ ನಡೆಸುತ್ತಿದ್ದ ಗೆಳೆಯನೊಂದಿಗಿನ ಮನಸ್ತಾಪವೇ ಘಟನೆಗೆ ಕಾರಣವೆಂಬ ಶಂಕೆ ವ್ಯಕ್ತವಾಗಿದೆ.

ಆತ್ಮಹತ್ಯೆಗೆ ಮುನ್ನ ಪ್ರಸನ್ನ ಅವರು ಡೆತ್ ನೋಟ್ ಬರೆದಿದ್ದು “ನನ್ನ ಸಾವಿಗೆ ಯಾರೂ ಕಾರಣವಲ್ಲ!” ಎಂದು ಉಲ್ಲೇಖಿಸಿದ್ದಾರೆ. ಇದೀಗ ಆಕೆಯ ಗೆಳೆಯ ತಮಿಳುನಾಡು ಮೂಲದ ವಿದ್ಯಾರ್ಥಿಯನ್ನು ಕರೆಸಿ ಪೋಲೀಸರು ವಿಚಾರಣೆ ಪ್ರಾರಂಭಿಸಿದ್ದಾರೆ. ಕೋಡಿಗೆಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.