ಕೆ.ಎನ್.ಪಿ.ವಾರ್ತೆ,ನವದೆಹಲಿ,ಮಾ.18;

ಸರಳತೆಗೆ ಹೆಸರಾದ ಗೋವಾ ಮುಖ್ಯಮಂತ್ರಿ, ಮಾಜಿ ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್‌ ನಿನ್ನೆ ಸಂಜೆ ವಿಧಿವಶರಾಗಿದ್ದು, ಪಣಜಿಯಲ್ಲಿರುವ ಎಸ್ ಎಜಿ ಗ್ರೌಂಡ್ಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ ನೆರವೇರಲಿದೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮನೋಹರ್ ಪರಿಕ್ಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಕಳೆದ ಒಂದು ವರ್ಷದಿಂದ ಮೇದೋಜೀರಕ ಗ್ರಂಥಿಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದರೂ ಮುಖ್ಯಮಂತ್ರಿ ಹುದ್ದೆಯನ್ನು ಮನೆಯಿಂದಲೇ ನಿರ್ವಹಿಸುತ್ತಿದ್ದ ಅವರು ಭಾನುವಾರ ತಮ್ಮ ಖಾಸಗಿ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 63 ವರ್ಷವಾಗಿತ್ತು.

ನಾಲ್ಕನೇ ಬಾರಿ ಗೋವಾ ಸಿಎಂ ಆಗಿದ್ದ ಅವರು, ಬಿಜೆಪಿ, ಗೋವಾ ಫಾರ್ವರ್ಡ್‌ ಪಾರ್ಟಿ, ಎಂಜಿಪಿ ಮತ್ತು ಪಕ್ಷೇತರರನ್ನು ಒಳಗೊಂಡ ಸಮ್ಮಿಶ್ರ ಸರಕಾರವನ್ನು ಅತ್ಯಂತ ಜೋಪಾನವಾಗಿ ಮುನ್ನಡೆಸುತ್ತಿದ್ದರು. ಕೇಂದ್ರ ರಕ್ಷಣಾ ಮಂತ್ರಿಯಾಗಿಯೂ 28 ತಿಂಗಳ ಕಾರ್ಯ ನಿರ್ವಹಿಸಿದ್ದರು. ಉರಿ ದಾಳಿಗೆ ಪ್ರತಿಕಾರವಾಗಿ ಸರ್ಜಿಕಲ್‌ ದಾಳಿ ನಡೆದಿದ್ದು ಇವರ ಅವಧಿಯಲ್ಲೆ.

ಇಂದು ಸಂಜೆ ಮನೋಹರ್ ಪರಿಕ್ಕರ್ ಅಂತ್ಯಸಂಸ್ಕಾರ :

ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಶೋಕವನ್ನು ಘೋಷಿಸಿದೆ. ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಿಗ್ಗೆ 9:00-10:30 ವರೆಗೆ ಗೋವಾದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ.

ಸಂಜೆ 4 ಗಂಟೆ ವರೆಗೆ ಪಣಜಿಯ ಕಲಾ ಅಕಾಡೆಮಿಯಲ್ಲಿ ಸಾರ್ವಜನಿಕ ದರ್ಶನದ ಬಳಿಕ ಮೆರವಣಿಗೆ ಮೂಲಕ ಪಣಜಿಯಲ್ಲಿರುವ ಎಸ್ ಎಜಿ ಗ್ರೌಂಡ್ಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.