ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.14;
ಗುರಿ ಇದ್ದರೆ ಮಾತ್ರ ಸಾಲದು. ಆ ಗುರಿಯನ್ನು ಸಾಧಿಸಲು ಸತತ ಪರಿಶ್ರಮ ಪಡಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಸದಾನಂದ ಪಾಟೀಲ ವಿದ್ಯಾರ್ಥಿ ಸಮುದಾಯಕ್ಕೆ ಕಿವಿಮಾತು ಹೇಳಿದರು.
ಇಲ್ಲಿನ ಕೆ.ಇ.ಬೋಡ್ರ್ಸ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ವಾರ್ಷಿಕ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಸುಮ್ಮನೆ ಪಾಠ ಕೇಳಿಕೊಂಡು ಹೋಗಬೇಡಿ. ಏನನ್ನಾದರೂ ಸಾಧಿಸಲು ಪ್ರಯತ್ನಿಸಿ. ವಿದ್ಯಾರ್ಥಿಗಳು ಸಂಶಯಗಳ ಕುರಿತು ಪ್ರಶ್ನೆ ಕೇಳಲು ಹಿಂದೇಟು ಹಾಕಬಾರದು. ತಂದೆ-ತಾಯಿ, ಗುರುವಿನ ಋಣ ತೀರಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲೆ ಇರುತ್ತದೆ ಎನ್ನುವುದನ್ನು ಮರೆಯಬಾರದು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಸುಧಾರಣಾ ಸಮಿತಿ ಅಧ್ಯಕ್ಷ ಶ್ರೀಕಾಂತ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳು ಇಂದು ಲಭ್ಯವಿದೆ. ಅದನ್ನು ಗುರುತಿಸಿ ಅದರ ಲಾಭ ಪಡೆದುಕೊಳ್ಳುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕ ವಸಂತ ಮುರ್ಡೇಶ್ವರ ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಕೊಡಮಾಡಿದ ಆರ್ಥಿಕ ನೆರವಿನ ಚೆಕ್‍ಗಳನ್ನು ಕುಮಾರಿ ಭಾಗ್ಯಶ್ರೀ ಪಾಟೀಲ ಹಾಗೂ ಕುಮಾರಿ ಕೀರ್ತಿ ಮರೇದ ಹಸ್ತಾಂತರಿಸಿದರು. ಸುಮಾರು 16 ವಿದ್ಯಾರ್ಥಿಗಳಿಗೆ ಉಚಿತ ನೋಟ್‍ಬುಕ್‍ಗಳನ್ನು ವಿತರಿಸಲಾಯಿತು.
ಸುರೇಶ ನಾಯ್ಕರ, ಪ್ರಾಂಶುಪಾಲೆ ಸುನಿತಾ ಕಡಪಟ್ಟಿ ಸ್ವಾಗತಿಸಿದರು. ಜಿ.ಸಿ. ಕುಲಕರ್ಣಿ ಪರಿಚಯಿಸಿದರು. ಸುರೇಶ ಮುಳೆ ವಂದಿಸಿದರು. ಕುಮಾರಿ ಕೀರ್ತಿ ಮರೇದ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹೇಮಲತಾ ಕರಿಗಾರ, ಅರುಣ ಗಂಜಿಗಟ್ಟಿ, ಎಸ್. ಎಲ್. ಶೇಖರಗೋಲ ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ : ಚಂದ್ರು ಹಿರೇಮಠ ಧಾರವಾಡ
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.