ಕೆ.ಎನ್.ಪಿ.ವಾರ್ತೆ,ಜಗಳೂರು,ಮಾ.11;

ಗುತ್ತಿದುಗ೯ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಲತಾರವರು ದಿವ್ಯಾಪ್ರೇಂ ಎಂಬ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ನಿನ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಪೋಲಿಯೋ ಕೊನೆಗಾಣಿಸಿ, ಪೋಲಿಯೋ ರಹಿತ ವಿಶ್ವದ ಕನಸು ನನಸಾಗಿಸಿ, ಜೀವನಕ್ಕಾಗಿ ಎರಡು ಹನಿ ಈ ಬಾರಿಯ ಧ್ಯೇಯವಾಕ್ಯವಾಗಿದೆ. 5ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸಿ ಎಂದರು.

ಪೋಲಿಯೋ ನಿರ್ಮೂಲನೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದಡಿ 5 ವರ್ಷದೊಳಗಿನ 326 ಮಕ್ಕಳಿಗೆ ಮಾ.10ರಂದು ಆರೋಗ್ಯ ಉಪಕೇಂದ್ರ ಗುತ್ತಿದುಗ೯ ಗ್ರಾಮದಲ್ಲಿ ಪೋಲಿಯೋ ಹನಿ ಹಾಕಿಸಲಾಯಿತು. ಈ ವೇಳೆ ಆಶಾ ಕಾರ್ಯಕರ್ತೆ ಕರಿಬಸಮ್ಮ, ANM ನಾಗರತ್ನ ರವರು ಉಪಸ್ಥಿತರಿದ್ದರು.

ವರದಿ : ವೇದಮೂರ್ತಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.