ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಏ.24;

ಬಿಡದಿಯ ಈಗಲ್ಟನ್‌ ರೆಸಾರ್ಟ್‌ನಲ್ಲಿ ಜನವರಿ 19ರ ರಾತ್ರಿ ವಿಜಯನಗರ ಕ್ಷೇತ್ರದ ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶ ಮಾಡದಂತೆ ಹಾಗೂ ಮತ್ತೆ ಇಂಥ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿರುವ ಹೈಕೋರ್ಟ್ ನ ಏಕ ಸದಸ್ಯ ಪೀಠ ಷರತ್ತುಬದ್ಧ ಜಾಮೀನು ನೀಡಿದೆ. 2 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಲಾಗಿದೆ.

ಜನವರಿ 19ರಂದು ತಡರಾತ್ರಿ ಗಣೇಶ್‌ ಅವರು ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರ ಗಾಯಗೊಂಡಿದ್ದ ಆನಂದ್‌ ಸಿಂಗ್‌ ಆಸ್ಪತ್ರೆ ಸೇರಿದ್ದರು. ಜ. 21ರಂದು ಗಣೇಶ್‌ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್‌ಐಆರ್‌ ದಾಖಲಾದ ದಿನದಿಂದಲೇ ಗಣೇಶ್‌ ಅವರು ತಲೆಮರೆಸಿಕೊಂಡಿದ್ದರು. ಪ್ರಕರಣದಲ್ಲಿ ಆರೋಪಿಯಾಗಿದ್ದ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಅವರನ್ನು ಕೊನೆಗೂ ಒಂದು ತಿಂಗಳ ಬಳಿಕ ಗುಜರಾತ್‌ನ ಅಹಮದಾಬಾದ್ ನಲ್ಲಿ ಪೋಲೀಸರು ಬಂಧಿಸಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.