ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.15;
ಇಲ್ಲಿನ ಕರ್ನಾಟಕ ಉಚ್ಛ ನ್ಯಾಯಾಲಯದ ಪೀಠದಲ್ಲಿಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯಾಯಮೂರ್ತಿ ಜಿ.ನರೇಂದರ್ ಅವರು ಧ್ವಜಾರೋಹಣ ನೆರವೇರಿಸಿದರು.
ಮಹಾತ್ಮ ಗಾಂಧೀಜಿ ಸೇರಿದಂತೆ ರಾಷ್ಟ್ರದ ಹಲವು ನಾಯಕರ ತ್ಯಾಗ, ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಹೋರಾಟಗಾರರ ಆದರ್ಶ, ಉದಾತ್ತ ದೇಶಪ್ರೇಮಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು.
ಸತ್ಯ, ಶಾಂತಿ, ಅಹಿಂಸಾ ಮಾರ್ಗಗಳು ಎಲ್ಲರ ಧ್ಯೇಯಗಳಾಗಬೇಕು ಎಂದು ನ್ಯಾಯಮೂರ್ತಿ ಜಿ.ನರೇಂದರ್ ಸ್ವಾತಂತ್ರ್ಯೋತ್ಸವ ಸಂದೇಶದಲ್ಲಿ ತಿಳಿಸಿದರು.
ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಬಿ.ಎಂ. ಶ್ಯಾಮಪ್ರಸಾದ, ಆಡಿಷನಲ್ ರಜಿಸ್ಟ್ರಾರ್ ಜನರಲ್ ಎಸ್.ವೈ. ವಟವಟಿ ಮತ್ತಿತರರು ಭಾಗವಹಿಸಿದ್ದರು. ಹೈಕೋರ್ಟ್ ಸಿಬ್ಬಂದಿ ಮತ್ತು ವಕೀಲರಿಂದ ಸಂಗೀತ ಕಾರ್ಯಕ್ರಮ ಜರುಗಿತು.
ವರದಿ : ಚಂದ್ರು ಹಿರೇಮಠ ಧಾರವಾಡ
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.