ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.14;
ತುಂಗಭದ್ರಾ ಅಣೆಕಟ್ಟೆಯಲ್ಲಿ ನಿನ್ನೆ 5.31 ಟಿ.ಎಂ.ಸಿ. ಅಡಿಯಷ್ಟು ಸಂಗ್ರಹಗೊಂಡಿದ್ದ ನೀರು, ಇಂದು 7.75 ಟಿ.ಎಂ.ಸಿ. ಅಡಿಗೆ ಏರಿಕೆ ಕಂಡಿದೆ.
ರಾಜ್ಯದ ಬಹುತೇಕ ಕಡೆ ಉತ್ತಮ ಮಳೆಯಾಗುತ್ತಿರುವ ಕಾರಣ ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಹೆಚ್ಚಳವಾಗಿದ್ದು, ಒಂದೇ ದಿನದಲ್ಲಿ ಎರಡು ಟಿ.ಎಂ.ಸಿ.ಅಡಿಗಿಂತಲೂ ಅಧಿಕ ನೀರು ಅಣೆಕಟ್ಟೆಗೆ ಹರಿದು ಬಂದಿದೆ.
ನಿನ್ನೆ ಅಣೆಕಟ್ಟೆಯಲ್ಲಿ 5.31 ಟಿ.ಎಂ.ಸಿ. ಅಡಿ ನೀರು ಸಂಗ್ರಹಗೊಂಡಿತ್ತು, ಆದರೆ ಇಂದು ಇದ್ದಕ್ಕಿದ್ದಂತೆ ಒಂದೇ ದಿನದಲ್ಲಿ ಎರಡು ಟಿ.ಎಂ.ಸಿ.ಅಡಿಗಿಂತಲೂ ಅಧಿಕ ಅಂದರೆ 7.75 ಟಿ.ಎಂ.ಸಿ. ಅಡಿಯಷ್ಟು ನೀರು ಅಣೆಕಟ್ಟೆಗೆ ಹರಿದು ಬಂದಿದೆ. ಈ ಮೂಲಕ 28,367 ಕ್ಯುಸೆಕ್ ಒಳಹರಿವು ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ತುಂಗಾ ಜಲಾಶಯ ತುಂಬಿದ್ದು, ಕ್ರಸ್ಟ್ ಗೇಟ್ ಗಳ ಮೂಲಕ ನೀರು ಹರಿಸುತ್ತಿರುವುದು ಹಾಗೂ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ ಎನ್ನಲಾಗಿದೆ.
ತುಂಗಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ :
- ಗರಿಷ್ಠ ಮಟ್ಟ : 1,633 ಅಡಿ (ಸಮುದ್ರ ಮಟ್ಟದಿಂದ)
- ಇಂದಿನ ಮಟ್ಟ: 1,586.95 (7.75 ಟಿ.ಎಂ.ಸಿ. ಅಡಿ)
- ಒಳಹರಿವು: 28,367 ಕ್ಯುಸೆಕ್
- ಹೊರಹರಿವು: 92 ಕ್ಯುಸೆಕ್
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
9513326661
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.