ಕೆ.ಎನ್.ಪಿ.ವಾರ್ತೆ,ಹೊಸಪೇಟೆ,ಅ.30;

ಬೈಕ್ ಸವಾರನೊಬ್ಬ ಬೈಕ್ ತೊಳೆಯಲಿಕ್ಕಾಗಿ ಕಾಲುವೆಗೆ ತೆರಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ನಡೆದಿದೆ.

ಹಗರಿಬೊಮ್ಮನಹಳ್ಳಿ ತಾಲೂಕಿನ ವರದಾಪುರ ಗ್ರಾಮದ ಶೇಖರಪ್ಪ (36) ಮೃತ ದುರ್ದೈವಿ. ಹೊಸಪೇಟೆಯ ಚಿತ್ವಾಡ್ಗಿ ಬಳಿ ಹರಿದಿರುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಯಲ್ಲಿ‌ ಭಾನುವಾರ ಮಧ್ಯಾಹ್ನ ನಡೆದ ಘಟನೆ ಇದಾಗಿದ್ದು, ಕಮಲಾಪುರ ಸಮೀಪ ವ್ಯಕ್ತಿಯ ಶವ ಪತ್ತೆಯಾಗಿದೆ.

ದೀಪಾವಳಿ ಹಿನ್ನೆಲೆ ಬೈಕ್ ತೊಳೆದು ಪೂಜಿಸಲು ಶೇಖರಪ್ಪ ಮುಂದಾಗಿದ್ದರೆಂದು ತಿಳಿದುಬಂದಿದೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.