ಕೆ.ಎನ್.ಪಿ.ವಾರ್ತೆ,ಸಿನಿಸಮಾಚಾರ;

ಟಾಲಿವುಡ್‌ನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ (62) ಸದ್ಯಕ್ಕೆ ಮುಂಬಯಿ ಏಷ್ಯನ್ ಹಾರ್ಟ್ ಇನ್‌ಸ್ಟಿಟ್ಯೂಟ್‌‍ನಲ್ಲಿ (ಎಹೆಚ್‍ಐ) ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ತೀವ್ರ ಎದೆನೋವಿಗೆ ತುತ್ತಾಗಿದ್ದ ಬ್ರಹ್ಮಾನಂದಂ ಅವರನ್ನು ಮುಂಬಯಿನ ಎಹೆಚ್‌ಐಗೆ ದಾಖಲಿಸಲಾಗಿತ್ತು. ಹೃದಯ ಸಂಬಂಧಿ ಸಮಸ್ಯೆಯಿದ್ದ ಕಾರಣ ಹೃದ್ರೋಗ ತಜ್ಞ ರಮಾಕಾಂತ್ ಪಾಂಡಾ ನೇತೃತ್ವದ ವೈದ್ಯರ ತಂಡ ಅವರಿಗೆ ಶಸ್ತ್ರಚಿಕಿತ್ಸೆ ಮಾಡಿದೆ. ಸದ್ಯಕ್ಕೆ ಅವರ ಆರೋಗ್ಯ ಪರಿಸ್ಥಿತಿ ಸುಧಾರಿಸಿದೆ. ಅಭಿಮಾನಿಗಳು ಆತಂಕಪಡಬೇಕಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಹಾಸ್ಯ ನಟನ ಪರಿಸ್ಥಿತಿ ತಿಳಿದುಕೊಂಡ ಅಭಿಮಾನಿಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ತೆಲುಗಿನಲ್ಲಿ 1000ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ರಹ್ಮಾನಂದಂ ಅಭಿನಯಿಸಿದ್ದು, ಒಂದಷ್ಟು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.