ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.25;

ಬೆಂಗಳೂರು ದಕ್ಷಿಣದ ದೊಡ್ಡ ಕೆರೆ ಎಂದೇ ಖ್ಯಾತಿಗಳಿಸಿರುವ ಹುಳಿಮಾವು ಕೆರೆಯ ಕೋಡಿ ಒಡೆದು, ಸುತ್ತಮುತ್ತಲಿನ ಬಡಾವಣೆಗಳಿಗೆ ನೀರು ನುಗ್ಗಿದ್ದು, ನೂರಾರು ಮನೆಗಳು ಜಲಾವೃತವಾಗಿರುವ ಘಟನೆ ನಿನ್ನೆ ನಡೆದಿದೆ.

ಇಲ್ಲಿನ ಬೊಮ್ಮನಹಳ್ಳಿ ವಲಯದ ಅರಕೆರೆ ವಾರ್ಡ್‌ನಲ್ಲಿರುವ ಹುಳಿಮಾವು ಕೆರೆಯ ಕೋಡಿ ಒಡೆದು ಅಕ್ಷಯ ಗಾರ್ಡನ್ ಅಪಾರ್ಟ್‌ಮೆಂಟ್ ಸಮುಚ್ಚಯದ ಆಸುಪಾಸಿನ ಪ್ರದೇಶಗಳು ಜಲಾವೃತವಾಗಿವೆ.

ಸಮೀಪದ ತಗ್ಗು ಪ್ರದೇಶದಲ್ಲಿರುವ ಅನೇಕ ಮನೆಗಳಿಗೂ ನೀರು ನುಗ್ಗಿದ ಪರಿಣಾಮ ಸುಮಾರು ಎರಡು ಸಾವಿರ ಮನೆಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ಪ್ರವಾಹದ ರೀತಿಯಲ್ಲಿ ಹರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಹುಳಿಮಾವು ಕೆರೆ ಒಟ್ಟು 140 ಎಕರೆ ಇದ್ದು, ನೀರು ಸಹ ಹೆಚ್ಚಿನ ಪ್ರಮಾಣದಲ್ಲಿತ್ತು. ಭಾನುವಾರ ಇದ್ದಕ್ಕಿದ್ದಂತೆ ನೀರು ಮನೆಯೊಳಗೆ ನುಗ್ಗಿದ್ದರಿಂದ ಜನ ಪರದಾಡುವಂತಾಗಿದೆ.

ನ್ಯೂನೋ ಆಸ್ಪತ್ರೆ, ಶಾಂತಿನಿಕೇತನ, ಕೃಷ್ಣನಗರ, ಹುಳಿಮಾವು ಸೇರಿದಂತೆ ಹಲವು ಲೇಔಟ್‌ಗಳಿಗೆ ನೀರು ನುಗ್ಗಿದೆ. ಅಷ್ಟೇ ಅಲ್ಲದೆ, ಕಾರು, ದ್ವಿಚಕ್ರ ವಾಹನಗಳು ಓಡಾಡದಂತಹ ಪರಿಸ್ಥಿತಿ ರಸ್ತೆಗಳಲ್ಲಿ ನಿರ್ಮಾಣವಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.