ಕೆ.ಎನ್.ಪಿ.ವಾರ್ತೆ,ಉಡುಪಿ,ಸೆ.04;

ಗಣೇಶ ವಿಸರ್ಜನೆ ಮೆರವಣಿಗೆಗಾಗಿ ಆಗಮಿಸಿದ್ದ ಹುಲಿ ವೇಷಧಾರಿಗಳ ತಂಡದ ವಾಹನ ಪಲ್ಟಿಯಾಗಿ ಓರ್ವ ವೇಷಧಾರಿ ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉಡುಪಿ ಜಿಲ್ಲೆ ಸಂತೆಕಟ್ಟೆಯಲ್ಲಿ ಇಂದು ನಡೆದಿದೆ.

ಘಟನೆಯಲ್ಲಿ ಪಡುಬಿದ್ರೆಯ ಸುಮಂತ್ (22) ಸಾವನ್ನಪ್ಪಿದ್ದಾರೆ. ಹುಲಿವೇಷಧಾರಿಗಳು ನೇಜಾರಿನಿಂದ ಸಂತೆಕಟ್ಟೆಗೆ ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಟೆಂಪೋ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಸುಮಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟೆಂಪೋದಲ್ಲಿ ಒಟ್ಟು ಹನ್ನೆರಡು ಮಂದಿ ಹುಲಿವೇಷಧಾರಿ ತಂಡದ ಸದಸ್ಯರಿದ್ದರು. ಅದರಲ್ಲಿ ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರ ಗಾಯಗೊಂಡವರನ್ನು ಮಣಿಪಾಲದ ಕೆ ಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಹಾಗೂ ಮಲ್ಪೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.