ಕೆ.ಎನ್.ಪಿ.ವಾರ್ತೆ,ಹೈದರಾಬಾದ್,ಡಿ.07;

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್’ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿಗಳ ಮೃತದೇಹಗಳ ಮರಣೋತ್ತರ ಪರೀಕ್ಷೆ ಅಂತ್ಯಗೊಂಡಿದ್ದು, ಡಿಸೆಂಬರ್ 9ರ ರಾತ್ರಿ 8 ಗಂಟೆವರೆಗೂ ಮೃತದೇಹಗಳನ್ನು ಸಂರಕ್ಷಿಸುವಂತೆ ಸರ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

ಎನ್’ಕೌಂಟರ್ ಕಾನೂನು ಬಾಹಿರ ಹತ್ಯೆ ಎಂದು ಹೇಳಲಾಗುತ್ತಿದ್ದು, ಪ್ರಕರಣ ಸಂಬಂಧ ನ್ಯಾಯಾಂಗ ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ನ್ಯಾಯಾಲಯ ತಿಳಿಸಿದೆ. ಅಲ್ಲದೆ, ಪೆನ್’ಡ್ರೈವ್ ಮೂಲಕ ಮರಣೋತ್ತರ ಪರೀಕ್ಷೆಯ ವಿಡಿಯೋವನ್ನು ಜಿಲ್ಲಾ ಪ್ರಧಾನ ನ್ಯಾಯಾಧೀಶರಿಗೆ ಸಲ್ಲಿಸುವಂತೆ ಸೂಚಿಸಿದೆ.

ನವೆಂಬರ್ 29 ರಂದು ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ನಾಲ್ವರು ಕಾಮುಕರು ಅಟ್ಟಹಾಸ ಮೆರೆದಿದ್ದರು. ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದ ನಾಲ್ವರು ಕಾಮುಕರು, ನಂತರ ಆಕೆಯನ್ನು ಹತ್ಯೆ ಮಾಡಿ, ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು.

ಇದರಂತೆ ನಿನ್ನೆ ಬೆಳಗಿನ ಜಾವ ತನಿಖೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನು ಕರೆದುಕೊಂಡು ಹೋಗಿದ್ದು, ಈ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೆ, ಪೊಲೀಸರ ಬಳಿಯಿದ್ದ ಪಿಸ್ತೂಲನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಕಾಮುಕರ ಮೇಲೆ ಎನ್’ಕೌಂಟರ್ ನಡೆಸಿ ಹತ್ಯೆ ಮಾಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.