ಕೆ.ಎನ್.ಪಿ.ವಾರ್ತೆ,ಹೈದರಾಬಾದ್,ಡಿ.06;

ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳೂ ಎನ್’ಕೌಂಟರ್’ನಲ್ಲಿ ಹತರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲಾ ನವೀನ್, ಜೊಲ್ಲಾ ಶಿವ ಮತ್ತು ಚಿಂತಕುಂಟಾ ಕೇಶವುಲು ಪೊಲೀಸರು ನಡೆಸಿದ ಎನ್‌ ಕೌಂಟರ್‌ನಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್ ಹೊರವಲಯದ ಷಾದ್ ನಗರದಲ್ಲಿ ಎನ್‌ ಕೌಂಟರ್ ನಡೆದಿದೆ.

ಕೆಲ ದಿನಗಳ ಹಿಂದಷ್ಟೇ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ಆರೋಪಿಗಳು, ನಂತರ ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟಿದ್ದರು. ಈ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿತ್ತು.

ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಮಹಜರು ಮಾಡಲು ಅತ್ಯಾಚಾರ, ಹತ್ಯೆ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು.

ಈ ಸಂದರ್ಭದಲ್ಲಿ ಆರೋಪಿಗಳು ಓಡಿ ಹೋಗಲು ಪ್ರಯತ್ನ ನಡೆಸಿದ್ದಾರೆ. ಆಗ ಪೊಲೀಸರು ಗುಂಡು ಹಾರಿಸಿದ್ದು, ಎಲ್ಲರೂ ಮೃತಪಟ್ಟಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.