ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.11;

ಐಎಂಎ ಹಗರಣದ ತನಿಖೆಯನ್ನು ಎಸ್‌ಎಫ್‌ಐಒ ನಡೆಸುವ ಸಾಧ್ಯತೆ ಇದೆ. ರಾಜಕಾರಣಿಗಳು, ಐಪಿಎಸ್ ಅಧಿಕಾರಿಗಳು ಸೇರಿದಂತೆ ಪ್ರಭಾವಿಗಳು ಈ ಹಗರಣದಲ್ಲಿ ಭಾಗಿಯಾಗಿರುವ ಅನುಮಾನವಿದೆ.

ಕೇಂದ್ರ ಕಾರ್ಪೊರೇಟ್ ಸಚಿವಾಲಯದ ಗಂಭೀರ ವಂಚನೆ ಪ್ರಕರಣಗಳ ತನಿಖಾ ಸಂಸ್ಥೆ (ಎಸ್‌ಎಫ್‌ಐಒ) ಐಎಂಎ ಹಗರಣದ ತನಿಖೆ ನಡೆಸುವ ಸಾಧ್ಯತೆ ಇದೆ. ಮನ್ಸೂರ್ ಖಾನ್ ಒಡೆತನದ ಐಎಂಎ ಸಂಸ್ಥೆಯ ಹಗರಣದ ಬಗ್ಗೆ ಎಸ್‌ಐಟಿ ತನಿಖೆ ಸದ್ಯ ನಡೆಯುತ್ತಿದೆ.

ರಿಜಿಸ್ಟ್ರಾರ್ ಆಫ್ ಕಂಪನೀಸ್ (ಆರ್‌ಒಸಿ) ಬೆಂಗಳೂರು ಕಚೇರಿ ಎಸ್‌ಎಫ್‌ಐಒ ತನಿಖೆಗೆ ಶಿಫಾರಸು ಮಾಡಿದೆ. ಹಗರಣದ ಪ್ರಮುಖ ರೂವಾರಿ ಮನ್ಸೂರ್ ಖಾನ್ ಸದ್ಯ ಎಸ್‌ಐಟಿ ವಶದಲ್ಲಿದ್ದು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಐಎಂಎ ಹಗರಣದ ಬಗ್ಗೆ ಎಸ್‌ಐಟಿ, ಇಡಿ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಆದರೆ, ಎಸ್‌ಎಫ್‌ಐಒ ತನಿಖೆ ಆರಂಭವಾದರೆ ಉಳಿದ ಎಲ್ಲಾ ತನಿಖಾ ಸಂಸ್ಥೆಗಳು ತನಿಖೆಯನ್ನು ನಿಲ್ಲಿಸಬೇಕಾಗುತ್ತದೆ ಎಂಬ ನಿಯಮವಿದೆ. ಆದ್ದರಿಂದ, ಎಸ್‌ಐಟಿ ತನಿಖೆ ಮುಂದುವರೆಯುವ ಬಗ್ಗೆ ಪ್ರಶ್ನೆ ಎದುರಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.