ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.18;

ಐಎಂಎ ವಂಚನೆ ಪ್ರಕರಣದ ರೂವಾರಿ, ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಹಾಗೂ ಇತರೆ ಏಳು ಜನರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ಖಾನ್ ಹಾಗೂ ಏಳು ಜನರ ವಿರುದ್ಧ ದೂರು ದಾಖಲಿಸಿದ್ದ ಇಡಿ, ಇದೀಗ ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ನೋಟಿಸ್ ನೀಡಿದೆ.

ಫೆಮಾ ಕಾಯಿದೆ ಉಲ್ಲಂಘಿಸಿ ವಿದೇಶಿ ಹೂಡಿಕೆ, ವಿದೇಶಿ ವಿನಿಮಯ, ವಿದೇಶಿ ವಹಿವಾಟು ನಡೆಸಿದ ಆರೋಪದ ಮೇರೆಗೆ ನೊಟೀಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾವಿರಾರು ಹೂಡಿಕೆದಾರರಿಗೆ ಹಣ ಹಿಂದುರಿಗಿಸದೆ ಮನ್ಸೂರ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದು, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ತನಿಖಾ ತಂಡ ತನಿಖೆಯನ್ನು ತೀವ್ರಗೊಳಿಸಿದ್ದು, ನಿನ್ನೆ ಖಾನ್‌ನ ಮೂರನೇ ಪತ್ನಿಯ ಮನೆ ಮೇಲೆ ದಾಳಿ ನಡೆಸಿ, ಚಿನ್ನಾಭರಣ ವಶಪಡಿಸಿಕೊಂಡಿತ್ತು. 40,600 ಮಂದಿ ಐಎಂಎಯಲ್ಲಿ ಹೂಡಿಕೆ ಮಾಡಿರುವುದಾಗಿ ದೂರು ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.