ಕೆ.ಎನ್.ಪಿ.ವಾರ್ತೆ,ಬ್ಯಾಂಕಾಕ್,ನ.05;

ದೇಶದಾದ್ಯಂತ ತೀವ್ರ ಆತಂಕ, ಗೊಂದಲಕ್ಕೆ ಕಾರಣವಾಗಿದ್ದ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದಕ್ಕೆ (ಆರ್‌ಸಿಇಪಿ) ಸಹಿ ಹಾಕಲು ಭಾರತ ಸೋಮವಾರ ನಿರಾಕರಿಸಿದೆ. ಇದು ದೇಶದ ರೈತರು, ಉದ್ಯಮಿಗಳು ಹಾಗೂ ವ್ಯಾಪಾರ ವಲಯಕ್ಕೆ ನೆಮ್ಮದಿ ನೀಡಿದೆ.

ತನ್ನ ಪ್ರಮುಖ ಕಳವಳಗಳ ಬಗ್ಗೆ ಚರ್ಚೆಯಾಗದೆ ಪರಿಹಾರೋಪಾಯಗಳನ್ನು ಸೂಚಿಸುವ ಪ್ರಯತ್ನಗಳು ನಡೆಯದೆ ಇರುವುದರಿಂದ ಆರ್‌ಸಿಇಪಿ ಒಪ್ಪಂದದೊಂದಿಗೆ ಸೇರಿಕೊಳ್ಳದೆ ಇರಲು ಭಾರತ ನಿರ್ಧರಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆರ್‌ಸಿಇಪಿ ಒಪ್ಪಂದದಿಂದ ಚೀನಾದ ಸರಕುಗಳು ಭಾರತದೊಳಗೆ ಪ್ರವಹಿಸುವ ಆತಂಕ ವ್ಯಕ್ತವಾಗಿತ್ತು. ಜತೆಗೆ ಸುಂಕವಿಲ್ಲದೆ ಸರಕುಗಳು ದೇಶದ ಮಾರುಕಟ್ಟೆಗೆ ಪ್ರವೇಶಿಸುವ ಒಪ್ಪಂದ ಇದಾಗಿರುವುದರಿಂದ ಅಡಿಕೆ ಮುಂತಾದ ಬೆಳೆಗಾರರು ಕಳವಳಗೊಂಡಿದ್ದರು.

ವಿಯೆಟ್ನಾಂನಲ್ಲಿ 2020ರ ಫೆಬ್ರವರಿಯಲ್ಲಿ ನಡೆಯಲಿರುವ ಆರ್‌ಸಿಇಪಿ ಶೃಂಗಸಭೆಯಲ್ಲಿ ಭಾರತವನ್ನು ಹೊರತುಪಡಿಸಿ ಉಳಿದ 15 ರಾಷ್ಟ್ರಗಳು ಈ ಒಪ್ಪಂದಕ್ಕೆ ಸಹಿ ಹಾಕಲಿವೆ.

ಈ ಒಪ್ಪಂದಕ್ಕೆ ಸಹಿ ಹಾಕಿದರೆ ಚೀನಾದಿಂದ ಅತ್ಯಂತ ಕಡಿಮೆ ಬೆಲೆಯಲ್ಲಿ ಸರಕುಗಳು ಭಾರತಕ್ಕೆ ಆಮದಾಗುತ್ತದೆ. ಇದರಿಂದ ಭಾರತೀಯ ವಸ್ತುಗಳಿಗೆ ಬೇಡಿಕೆ ಕುಸಿದು, ಭಾರತದ ತಯಾರಿಕಾ ವಲಯಕ್ಕೆ ಧಕ್ಕೆಯಾಗುತ್ತದೆ. ಹಾಲಿನ ಉತ್ಪನ್ನಗಳೂ ಕಡಿಮೆ ಬೆಲೆಯಲ್ಲಿ ಆಮದಾಗುವುದರಿಂದ ಭಾರತದ ಹೈನುಗಾರಿಕೆಗೆ ಧಕ್ಕೆಯಾಗುವ ಸಾಧ್ಯತೆ ಇತ್ತು.

ಒಪ್ಪಂದಕ್ಕೆ ವಿರೋಧ ಏಕೆ?

ಆರ್‌ಸಿಇಪಿ ಅಡಿಯಲ್ಲಿ ಚೀನಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ ಶೇ 74ರಷ್ಟು ಸರಕುಗಳು ಹಾಗೂ ಜಪಾನ್, ದಕ್ಷಿಣ ಆಫ್ರಿಕಾ ಮತ್ತು ಆಸಿಯಾನ್‌ನ ಒಟ್ಟು 15 ದೇಶಗಳ ಶೇ 90ರಷ್ಟು ಸರಕುಗಳ ಮೇಲಿನ ಸುಂಕವನ್ನು ಭಾರತ ತೆಗೆದುಹಾಕಬೇಕಾಗುತ್ತದೆ. ಇದರಿಂದ ವಿದೇಶಿ ವಸ್ತುಗಳು ಯಥೇಚ್ಛವಾಗಿ ಭಾರತದ ಮಾರುಕಟ್ಟೆಗೆ ಲಗ್ಗೆ ಇಡುತ್ತವೆ. ತೀರಾ ಅಗ್ಗದ ಹಾಗೂ ಗುಣಮಟ್ಟವಿಲ್ಲದ ಚೀನಾದ ಸರಕುಗಳು ಮಾರುಕಟ್ಟೆಯನ್ನು ತುಂಬಿಕೊಳ್ಳುತ್ತವೆ. ಅದಕ್ಕಿಂತ ಮುಖ್ಯವಾಗಿ ಭಾರತವು ಇಂತಹ ಸರಕುಗಳ ವಿಲೇವಾರಿ ಘಟಕವಾಗಿ ಬದಲಾಗುತ್ತದೆ. ಜತೆಗೆ ಇಲ್ಲಿನ ರೈತರು, ಉದ್ಯಮಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ. ಹೀಗಾಗಿ ಈ ಒಪ್ಪಂದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.