ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಆ.02;

ಜಗಳೂರಿನ ಹೋ.ಚಿ. ಬೋರಯ್ಯ ಕಾಲೇಜು ಮತ್ತು ಕೋರ್ಟ್ ಗಳಲ್ಲಿ ಕಳ್ಳತನ ನಡೆಸಿದ್ದ ಕಳ್ಳರನ್ನು ಬಂಧಿಸಿರುವ ಪೊಲೀಸರು ಬಂಧಿತರಿಂದ 1.12 ಲಕ್ಷ ರೂ. ಮೌಲ್ಯದ ಕಂಪ್ಯೂಟರ್ ಗಳು, ಬೈಕ್ ವಶಕ್ಕೆ ಪಡೆದಿದ್ದಾರೆ.

ಚೌಡಪ್ಪ, ಗುರಪ್ಪ, ಓಬಯ್ಯ ಬಂಧಿತ ಆರೋಪಿಗಳಾಗಿದ್ದು. ಜಗಳೂರು ತಾಲೂಕು ತಮಲೇಹಳ್ಳಿಯವರು ಎಂದು ತಿಳಿದು ಬಂದಿದೆ. ಮೂವರು ಜನವರಿ ಯಲ್ಲಿ ಹೋ.ಚಿ. ಬೋರಯ್ಯ ಕಾಲೇಜು ಮತ್ತು ಕೋರ್ಟ್ ನ ಬಾಗಿಲು ಮುರಿದು ಕಂಪ್ಯೂಟರ್ ಗಳನ್ನು ಕದ್ದಿದ್ದರು.

ಈ ಬಗ್ಗೆ ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಕೊಟ್ಟೂರು ತಾಲೂಕು ಹೊಸಳ್ಳಿ ಹೈಸ್ಕೂಲ್ ನಲ್ಲು ಕಳ್ಳತನ ನಡೆಸಿದ್ದರು. ನಿನ್ನೆ ತಡರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.