ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.12;

ಇದೇ ಮೊದಲ ಬಾರಿಗೆ ಪಕ್ಷದ ವೆಬ್ ಸೈಟ್ ಪ್ರಾರಂಭ ಮಾಡಿದ್ದೇವೆ. ಈ ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಅವರದ್ದೇ ಸ್ವಂತ ವೆಬ್‌ಸೈಟ್ ಹೊಂದಿದ್ದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.

ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಪಕ್ಷದ ಅಧಿಕೃತ ವೆಬ್ ಸೈಟ್ ಅನ್ನು ಬಿಡುಗಡೆ ಮಾಡಿ ಮಾತನಾಡಿದರು. ಇಂದು ಪಕ್ಷದಿಂದ ಅಧಿಕೃತ ವೆಬ್ ಸೈಟ್ ಉದ್ಘಾಟನೆ ಮಾಡಲಾಗಿದೆ. ಇದರಿಂದ ಪಕ್ಷದ ಕಾರ್ಯಕ್ರಮಗಳ ಪ್ರಚಾರಕ್ಕೆ ಅನುಕೂಲವಾಗಲಿದೆ ಹಾಗೂ ಸಾಮಾಜಿಕ ಜಾಲತಾಣಗಳ ಮುಖಾಂತರ ಜನತೆಗೆ ತಿಳಿಸುವ ಪ್ರಯತ್ನ ಇದಾಗಿದೆ.

ನಮ್ಮ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ಅವರಿಗೆ ವೆಬ್‌ಸೈಟ್‌ ನಿರ್ವಹಣೆಯ ಪೂರ್ಣ ಜವಾಬ್ದಾರಿ ನೀಡಲಾಗಿದೆ. ಇದು ಪಕ್ಷದ ಹೆಸರಲ್ಲಿ ನಡೆಯಲಿದ್ದು, ಇದರಲ್ಲಿ ಯಾವುದೇ ‌ನೂನ್ಯತೆಗಳಿಲ್ಲ. ಇದರಲ್ಲಿ ನಾನು, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳು ಇರುತ್ತಾರೆ. ಕಾರ್ಯಕರ್ತರ ಯಾವುದೇ ಸಮಸ್ಯೆ ಇದ್ದರೂ ವೈಬ್‌ಸೈಟ್‌ ಬಳಸಿಕೊಂಡು ಸಂಪರ್ಕಿಸಬಹುದು ಎಂದರು.

ಡಿಜಿಟಲ್‌ ಯುಗದಲ್ಲಿ ನಾವು ಸ್ವಲ್ಪ ಹಿಂದೆ ಬಿದ್ದಿದ್ವಿ. ಆದರೆ. ಈಗ ಹೊಸದೊಂದು ಯೋಜನೆ ‌ಮಾಡಿದ್ದೇವೆ. ಇದರಲ್ಲಿ ‌ಅನುಭವ ಇರುವ ಸಿಬ್ಬಂದಿ ಇರುತ್ತಾರೆ. ಹೀಗಾಗಿ ಇದರಿಂದ ‌ಪಕ್ಷದ ಸಂಘಟನೆಗೆ ಅನುಕೂಲ ಆಗಲಿದೆ ಎಂದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.