ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.14;

ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಜೆಡಿಎಸ್​ 10 ಕ್ಷೇತ್ರಗಳಿಗೆ ಗುರುವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು, ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಯಲ್ಲಿ 15ರಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ನಾಳೆ ಘೋಷಿಸುವುದಾಗಿ ತಿಳಿಸಿದೆ.

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ

  • ಯಲ್ಲಾಪುರ – ಚೈತ್ರಾಗೌಡ
  • ಹಿರೇಕೆರೂರು -ಉಜನಪ್ಪ ಜಟ್ಟೆಪ್ಪ
  • ರಾಣೆ ಬೆನ್ನೂರು – ಮಲ್ಲಿಕಾರ್ಜುನ ಹಲಗೇರಿ
  • ವಿಜಯನಗರ – ಎನ್.ಎಂ.ನಬಿ
  • ಚಿಕ್ಕಬಳ್ಳಾಪುರ – ಕೆ.ಪಿ.ಬಚ್ಚೇಗೌಡ
  • ಕೆ.ಆರ್ ಪುರಂ – ಸಿ.ಕೃಷ್ಣಮೂರ್ತಿ
  • ಯಶವಂತಪುರ – ಟಿ.ಎನ್ ಜವರಾಯಿಗೌಡ
  • ಶಿವಾಜಿನಗರ – ತನ್ವೀರ್ ಅಹ್ಮದ್​​ವುಲ್ಲಾ
  • ಕೆ.ಆರ್.ಪೇಟೆ – ದೇವರಾಜ್ ಬಿ.ಎಲ್
  • ಹುಣಸೂರು – ಸೋಮಶೇಖರ್

ಇನ್ನು ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವ ಶರತ್ ಬಚ್ಚೇಗೌಡ ಅವರಿಗೆ ಬಾಹ್ಯ ಬೆಂಬಲ ನೀಡುವುದಾಗಿ ಜೆಡಿಎಸ್​ಘೋಷಿಸಿದೆ

ಒಟ್ಟು 15 ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 9ರಂದು ಮತ ಎಣಿಕೆ ನಡೆಯಲಿದೆ. ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ನವೆಂಬರ್ 18 ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕವಾಗಿದೆ.

ಅನರ್ಹಗೊಂಡ ಶಾಸಕರು ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಅಂತಿಮಗೊಳಿಸಿದ್ದು, ತೀರ್ಪು ನೀಡಿದೆ, ಅರ್ನಹತೆಯನ್ನು ಎತ್ತಿ ಹಿಡಿದರೂ ಚುನಾವಣೆ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. 

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.