ಕೆ.ಎನ್.ಪಿ.ವಾರ್ತೆ,ಜಮ್ಷೆಡ್ ಪುರ,ಡಿ.07;

ಜಾರ್ಖಂಡ್ ವಿಧಾನಸಭೆ (Jharkhand Assembly Election) ಯ ಎರಡನೇ ಹಂತದ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು ಮತದಾರರು ಮತಗಟ್ಟೆಗಳ ಹೊರಗೆ ಸಾಲಾಗಿ ನಿಂತು ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ.

ಐದು ಹಂತಗಳಲ್ಲಿ ನಡೆಯುವ ಜಾರ್ಖಂಡ್ ವಿಧಾನಸಭಾ ಕ್ಷೇತ್ರಗಳ ಮತದಾನ (Jharkhand Assembly Election) ಪೈಕಿ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಜಮ್ಷೆಡ್ ಪುರ ಪೂರ್ವ ಮತ್ತು ಪಶ್ಚಿಮ ಕ್ಷೇತ್ರ ಸೇರಿದಂತೆ 20 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಇಂದಿನ ಮತದಾನ ಕಾರ್ಯದಲ್ಲಿ ಸುಮಾರು 48 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಭದ್ರತಾ ಕಾರಣಗಳಿಗಾಗಿ ಇಂದು 18 ಕ್ಷೇತ್ರಗಳಲ್ಲಿ ಅಪರಾಹ್ನ 3 ಗಂಟೆಗೆ ಮತದಾನ ಪ್ರಕ್ರಿಯೆ ಮುಕ್ತಾಯವಾಗಲಿದೆ.

ಇನ್ನು ಜಮ್ಷೆಡ್ ಪುರ ಪೂರ್ವ ಮತ್ತು ಪಶ್ಚಿಮ ಕ್ಷೇತ್ರಗಳಲ್ಲಿ ಮತದಾರರು ಸಂಜೆ 5 ಗಂಟೆಯೊಳಗೆ ಬಂದು ಮತದಾನ ಮಾಡಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿನಯ್ ಕುಮಾರ್ ಚೌಬೆ ತಿಳಿಸಿದ್ದಾರೆ.

ಜಾರ್ಖಂಡ್ ನಲ್ಲಿ ಒಟ್ಟು ಐದು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 30ರಿಂದ ಡಿಸೆಂಬರ್ 20 ರ ತನಕ ಮತದಾನ ನಿಗದಿಯಾಗಿದೆ.

ಡಿಸೆಂಬರ್ 23ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.