ಕೆ.ಎನ್.ಪಿ.ವಾರ್ತೆ,ಚಿಕ್ಕಬಳ್ಳಾಪುರ,ಆ.16;

ದಕ್ಷ, ಪ್ರಾಮಾಣಿಕ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಅವರ ವರ್ಗಾವಣೆ ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಇಂದು ಚಿಕ್ಕಬಳ್ಳಾಪುರ ಜಿಲ್ಲಾಕೇಂದ್ರ ಬಂದ್‌ಗೆ ಕರೆ ನೀಡಿದೆ.

ಬಂದ್ ಹಿನ್ನೆಲೆ ಚಿಕ್ಕಬಳ್ಳಾಪುರ ನಗರದ ಡಾ.ಬಿ.ಅಂಬೇಡ್ಕರ್ ವೃತ್ತದಲ್ಲಿ, ಪ್ರಮುಖ ರಸ್ತೆಗಳಲ್ಲಿ ರೈತ ಹಾಗೂ ಕನ್ನಡಪರ ಸಂಘಟನೆಗಳ ಹೋರಾಟಗಾರರು ಪಂಜಿನ ಮೆರವಣಿಗೆ ನಡೆಸಿದರು.

ಈ ವೇಳೆ ದಕ್ಷ, ಪ್ರಾಮಾಣಿಕ ಅಧಿಕಾರಿಯ ವರ್ಗಾವಣೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಬಂದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್  ಕಲ್ಪಿಸಲಾಗಿದೆ.

ಕಳೆದ ಒಂದು ವರ್ಷದ ಹಿಂದೆ ಜಿಲ್ಲೆಗೆ ಬಂದ ಅನಿರುದ್ಧ್‌ ಶ್ರವಣ್‌ ಅವರು ಅತ್ಯಂತ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದು, ಜಿಲ್ಲೆಯಾಗಿ 12 ವರ್ಷ ಕಳೆದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾಣದೇ ಇರುವುದು ದುರಂತ. ಇಂತಹ ಜಿಲ್ಲೆಗೆ ಜಿಲ್ಲಾಧಿಕಾರಿಗಳಾಗಿ ಬಂದ ಅನಿರುದ್ಧ್‌ ಶ್ರವಣ್‌ ಅವರು ಜಿಲ್ಲೆಯಾದ್ಯಂತ ಪಾತಾಳಕ್ಕೆ ಕುಸಿದಿರುವ ಅಂರ್ತಜಲವನ್ನು ಅಭಿವೃದ್ಧಿಪಡಿಸಲು ಕಣ್ಮರೆಯಾಗಿದ್ದ ಕಲ್ಯಾಣಿಗಳನ್ನು ದುರಸ್ಥಿಗೊಳಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದರು.

ರೈತರ ಜಮೀನನ್ನು ಪೋಡಿಮುಕ್ತಗೊಳಿಸಿ ನಿರಂತರವಾಗಿ ಕಛೇರಿಗಳಿಗೆ ಅಲೆಯುತ್ತಿದ್ದ ರೈತರಿಗೆ ಸಹಾಯಹಸ್ತ ಚಾಚಿದ್ದಾರೆ. ಜಿಲ್ಲೆಯಾದ್ಯಂತ ಬಡಜನತೆ ಮತ್ತು ಬುಡಕಟ್ಟು ಜನಾಂಗ ವಾಸಿಸುವ ಗುಡಿಸಲುಗಳಿಗೆ ಭೇಟಿ ನೀಡಿ ಗುಡಿಸಲು ಮುಕ್ತ ಗ್ರಾಮಗಳನ್ನು ಮಾಡುವಲ್ಲಿ ಅಪಾರ ಶ್ರಮ ವಹಿಸಿ ಜಿಲ್ಲೆಯಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಜನಮನ್ನಣೆ ಗಳಿಸಿದ್ದಾರೆ.

ಇಂತಹ ಪ್ರಾಮಾಣಿಕ ಜಿಲ್ಲಾಧಿಕಾರಿಗಳನ್ನು ಇಲ್ಲಿಯೇ ಉಳಿಸಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗುವಂತೆ ಕ್ರಮ ಕೈಗೊಳ್ಳಬೇಕು. ಡಿಸಿ ವರ್ಗಾವಣೆಯನ್ನು ರದ್ದುಗೊಳಿಸಿ ಜಿಲ್ಲೆಯಲ್ಲಿಯೇ ಮುಂದುವರೆಸಬೇಕು. ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ಹಾಕುವ ಸಲುವಾಗಿ ಬಂದ್‌ಗೆ ಕರೆ ನೀಡಲಾಗಿದೆ. ನಗರದ ಜನತೆಯು ದಕ್ಷ ಅಧಿಕಾರಿಯ ಪರವಾಗಿ ಧ್ವನಿ ಎತ್ತಬೇಕು. ಬಂದ್‌ ಸಂಪೂರ್ಣ ಸಹಕಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ, ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ, ಕರವೇ ಯುವಸೇನೆ ಜಿಲ್ಲಾಧ್ಯಕ್ಷ ಶ್ರೀರಾಮೇಗೌಡ ಹಾಗೂ ಇತರೆ ಸಂಘಟನೆಗಳು ಸಂಘ ಸಂಸ್ಥೆಗಳ ಮುಖಂಡರು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.