ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.14;

ಹುಬ್ಬಳ್ಳಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯನ್ನು ಬಿಡುಗಡೆ ಮಾಡಲು ಜಿ.ಪಂ. ಅಧ್ಯಕ್ಷರು ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಒತ್ತಾಯಿಸಿ ಸರ್ಕಾರದ ಆದೇಶ ಜಾರಿಗೊಳಿಸಲು ಪಟ್ಟು ಹಿಡಿದಾಗ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಆರ್ ಮಾತನಾಡಿ, ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶದಲ್ಲಿ ಮೂವರು ಕಾರ್ಯನಿರ್ವಾಹಕ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.

ಕಲಘಟಗಿ ತಾ.ಪಂ.ಗೆ ಒಬ್ಬ ಅಧಿಕಾರಿಯನ್ನು ನೇಮಿಸಿರುತ್ತಾರೆ. ಅವರು ಈವರೆಗೂ ಹಾಜರಾಗಿರುವುದಿಲ್ಲ. ಈಗಾಗಲೇ ಜಿಲ್ಲೆಯಲ್ಲಿ ಹಲವು ಹಿರಿಯ ಅಧಿಕಾರಿಗಳ ಕೊರತೆ ಇದೆ. ಬಹಳಷ್ಟು ಕಾಮಗಾರಿಗಳ ಪ್ರಗತಿ ಕುಂಠಿತವಾಗಿದೆ. ಹುಬ್ಬಳ್ಳಿ ತಾ.ಪಂ. ಇಓ ರಾಮಚಂದ್ರ ಹೊಸಮನಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ಬೇರೆಯವರನ್ನು ನಿಯೋಜಿಸಿಲ್ಲ ಆದ್ದರಿಂದ ಇವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿಲ್ಲ. ಅಲ್ಲದೇ ವರ್ಗಾವಣೆ ಆದೇಶದಲ್ಲಿ ಅವರ ಮಾತೃ ಇಲಾಖೆ ತಪ್ಪಾಗಿ ನಮೂದಾಗಿದೆ.

ಸರ್ಕಾರದ ಪರಿಷ್ಕೃತ ಆದೇಶ ಬರುವವರೆಗೆ ತಮ್ಮನ್ನು ಬಿಡುಗಡೆ ಮಾಡಬಾರದು ಎಂದು ಹೊಸಮನಿ ಮನವಿ ಸಲ್ಲಿಸಿದ್ದಾರೆ. ಆದ್ದರಿಂದ ಜಿಲ್ಲೆಗೆ ಬೇರೆ ಅಧಿಕಾರಿಗಳನ್ನು ನೇಮಿಸುವವರೆಗೆ ಆಡಳಿತ ದೃಷ್ಟಿಯಿಂದ ಇವರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಸ್ಪಷ್ಟನೆಯಲ್ಲಿ ತಿಳಿಸಿದ್ದಾರೆ.

ವರದಿ : ಚಂದ್ರು ಹಿರೇಮಠ ಧಾರವಾಡ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.