ಕೆ.ಎನ್.ಪಿ.ವಾರ್ತೆ,ಹಾವೇರಿ,ನ.03;

ರಾಣೆಬೆನ್ನೂರಿನಲ್ಲಿ ನವೆಂಬರ್ 10ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. 50ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಪಿ. ಕೆ. ಕೆ. ಇನಿಷಿಯೇಟಿವ್ಸ್, ರಾಣೆಬೆನ್ನೂರು ಮತ್ತು ಎಲ್. ಸಿ. ಸಿ. ಧಾರವಾಡ ಇವರ ಜಂಟಿ ಸಹಯೋಗದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 8 ರಿಂದ ಸಂಜೆ 5 ಗಂಟೆ ವರೆಗೆ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗಮೇಳದಲ್ಲಿ ಪಾಲ್ಗೊಳ್ಳುವವರು ಆನ್‌ಲೈನ್ ಮತ್ತು ಖುದ್ದಾಗಿ ಕಚೇರಿಯಲ್ಲಿ ಫಾರ್ಮ್ ಪಡೆದು ನೋಂದಣಿ ಮಾಡಿಸಿಕೊಳ್ಳಬೇಕು. ಶಾಲೆ ತೊರೆದವರು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಜೆಓಸಿ, ಪದವೀಧರರು ಮೇಳದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9731568854 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ತಮ್ಮ ವ್ಯಕ್ತಿ ಪರಿಚಯ ಪತ್ರದ ಕನಿಷ್ಠ 5 ಪ್ರತಿಗಳನ್ನು ತರಬೇಕು. ವಿದ್ಯಾರ್ಹತೆ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಜೆರಾಕ್ಸ್ ಪ್ರತಿಗಳನ್ನು ತರಬೇಕು ಎಂದು ಸೂಚನೆ ನೀಡಲಾಗಿದೆ.

ಉದ್ಯೋಗ ಮೇಳ ನಡೆಯುವ ವಿಳಾಸ : ಬಿ. ಕೆ. ಗುಪ್ತಾ ಹೈಸ್ಕೂಲ್, ರಾಣೆಬೆನ್ನೂರು.

ನೋಂದಣಿ ಫಾರ್ಮ್‌ಗಾಗಿ ಪಿ. ಕೆ. ಕೆ. ಇನಿಷಿಯೇಟಿವ್ಸ್, ಕೆ. ಬಿ. ಕೋಳಿವಾಡ ಗೃಹ ಕಚೇರಿ, ವಾಗೀಶ ನಗರ, 6ನೇ ಕ್ರಾಸ್, ರಾಣೆಬೆನ್ನೂರು

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.