ಕೆ.ಎನ್.ಪಿ.ವಾರ್ತೆ,ನವದೆಹಲಿ,ಜೂ.14;

ಹದಿನೇಳನೇ ಲೋಕಸಭೆಯ ಚೊಚ್ಚಲ ಅಧಿವೇಶನ ಜೂನ್ 17 ರಿಂದ ಆರಂಭವಾಗಿ ಜುಲೈ 26ರ ವರೆಗೆ ನಡೆಯಲಿದೆ. 

ಇದು ಮೊದಲ ಅಧಿವೇಶನ ಆಗಿದ್ದು, ಭಾರಿ ನಿರೀಕ್ಷೆಗಳನ್ನು ಮೂಡಿಸಿದೆ. ತ್ರಿವಳಿ ತಲಾಖ್ ಸೇರಿದಂತೆ ಹಲವು ಪ್ರಮುಖ ಮಸೂದೆಗಳು ಸದನದಲ್ಲಿ ಮಂಡನೆ ಆಗಲಿವೆ.

ಜೂನ್ 17 ರಂದು ದೆಹಲಿಯ ಲೋಕಸಭೆ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಉಭಯ ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮತ್ತು ಅದೇ ದಿನ ಹೊಸ ಸಂಸದರು ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.

ಪ್ರಥಮ ಅಧಿವೇಶನವು ಜೂನ್ 17 ರಿಂದ ಜುಲೈ 26 ರ ವರೆಗೆ ನಡೆಯಲಿದ್ದು, ಜುಲೈ 5 ರಂದು ಬಹುನಿರೀಕ್ಷಿತ ಕೇಂದ್ರ ಬಜೆಟ್ ಮಂಡನೆ ಆಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.