ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.20;
ಕಬಿನಿ ಹಾಗೂ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಮಧ್ಯಾಹ್ನ ಬಾಗಿನ ಅರ್ಪಿಸಿದರು.
ಈ ಬಾರಿ ಮುಂಗಾರು ಮಳೆಯ ಅಬ್ಬರ ಜೋರಾಗಿರುವದರಿಂದ ಬಹುಬೇಗನೆ ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಪತ್ನಿ ಸಮೇತರಾಗಿ ಆಗಮಿಸಿ ಬಾಗಿನ ಅರ್ಪಿಸಿದರು.
ನಿನ್ನೆ ಸಂಜೆ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಇಂದು ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳಿಗೆ ಬಾಗಿನ ಅರ್ಪಿಸಿದರು.
ಇತ್ತೀಚೆಗೆ ಸುರಿದ ಸತತ ಮಳೆಯಿಂದಾಗಿ ಕಬಿನಿ, ಹಾರಂಗಿ ಹಾಗೂ ಕೆಆರ್‍ಎಸ್ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ ಹಿನ್ನೆಲೆ ದಂಪತಿ ಸಹಿತವಾಗಿ ಕಬಿನಿ ಮತ್ತು ಕೆಆರ್‍ಎಸ್ ಜಲಾಶಯಗಳಿಗೆ ಕುಮಾರಸ್ವಾಮಿ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ಮೈಸೂರು, ಮಂಡ್ಯ ಜಿಲ್ಲೆಯ ಸಚಿವರು ಹಾಗೂ ಶಾಸಕರು ಹಾಜರಿದ್ದರು. ಇದಕ್ಕೂ ಮುನ್ನ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಸಲ್ಲಿಸಿದರು.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.