ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.17;

ಅತೃಪ್ತ ಶಾಸಕರ ರಾಜೀನಾಮೆ ಕುರಿತು ಇಂದು ಸುಪ್ರೀಂಕೋರ್ಟ್ ತನ್ನ ತೀರ್ಪು ಪ್ರಕಟಿಸಿದ್ದು, ನಿರ್ಧಿಷ್ಟ ಸಮಯದಲ್ಲಿ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ನಿನ್ನೆ ಅತೃಪ್ತ ಶಾಸಕರ ಪರ ವಕೀಲರ ಪರ – ವಿರೋಧ ವಾದಗಳನ್ನು ಆಲಿಸಿದ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರನ್ನೊಳಗೊಂಡ ಪೀಠ ಈ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ತಾನು ಮಧ್ಯಸ್ಥಿಕೆ ವಹಿಸುವುದಿಲ್ಲವೆಂದು ಹೇಳಿರುವ ನ್ಯಾಯಾಲಯ ಸ್ಪೀಕರ್ ಹುದ್ದೆಯ ಘನತೆ ಎತ್ತಿ ಹಿಡಿದಿದೆ.

ಸ್ಪೀಕರ್ ಅವರು ತಮ್ಮ ವಿವೇಚನೆಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರ್ಯರಾಗಿದ್ದು, ಅನರ್ಹತೆ ಮತ್ತು ರಾಜೀನಾಮೆ ಅಂಗೀಕಾರ ಎರಡೂ ಸಹ ಸ್ಪೀಕರ್ ಅವರ ಬಳಿಯೇ ಇದ್ದು, ಸೂಕ್ತ ಸಮಯದಲ್ಲಿ ಅವರು ನಿರ್ಧಾರ ತೆಗೆದುಕೊಳ್ಳಬೇಕಿದೆ.

ಸ್ಪೀಕರ್ ಅವರು ಕಾಲಮಿತಿಯೊಳಗೆ ಶಾಸಕರ ರಾಜೀನಾಮೆಯನ್ನು ಇತ್ಯರ್ಥಪಡಿಸಬೇಕು. ಸ್ಪೀಕರ್ ಅವರು ರಾಜೀನಾಮೆಯನ್ನು ಇತ್ಯರ್ಥಪಡಿಸುವ ವರೆಗೂ ವಿಧಾನಸಭೆಯ ಯಾವ ಪ್ರಕ್ರಿಯೆಗಳಿಗೂ ಶಾಸಕರು ಒಳಗಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಸಾಂವಿಧಾನಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಕಡ್ಡಾಯವೆಂದು ಹೇಳಿದ ಸುಪ್ರೀಂಕೋರ್ಟ್‌, ದೊಡ್ಡ ಮಟ್ಟದ ಕಾನೂನಿನ ತೊಡಕುಗಳಿಗೆ ಸೀಮಿತ ಕಾಲಮಿತಿಯಲ್ಲಿ ಉತ್ತರ ಹುಡುಕಿಕೊಳ್ಳುವುದು ಕಷ್ಟ ಎಂದು ಹೇಳಿದೆ.

ರಾಜೀನಾಮೆ ಅಂಗೀಕಾರದ ಬಗ್ಗೆಯಾಗಲಿ, ಅನರ್ಹತೆಯ ಬಗ್ಗೆಯಾಗಲಿ ನಿರ್ದಿಷ್ಟ ಸೂಚನೆಯನ್ನು ಸುಪ್ರೀಂಕೋರ್ಟ್ ಸ್ಪೀಕರ್ ಅವರಿಗೆ ನೀಡಲಿಲ್ಲ. ಬದಲಿಗೆ ಅವರನ್ನು ಸ್ವಂತ ವಿವೇಚನೆ ಮೇರೆಗೆ ನಿರ್ಧರಿಸಲು ಬಿಟ್ಟಿದೆ.

ಅತೃಪ್ತ ಶಾಸಕರು ನಿರಾಳ :

ಸುಪ್ರೀಂ ಕೋರ್ಟ್ ನ ಈ ತೀರ್ಪಿನಿಂದಾಗಿ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ದೊರೆತಿದ್ದು, ರಾಜೀನಾಮೆ ನೀಡಿರುವ 15 ಶಾಸಕರನ್ನು ವಿಧಾನಸಭೆಗೆ ಹಾಜರಾಗಬೇಕೆಂದು ಒತ್ತಾಯ ಮಾಡುವಂತಿಲ್ಲ ಎಂದು ಹೇಳಿದೆ, ಈ ಮೂಲಕ ಶಾಸಕರಿಗೆ ನೀಡಿದ ವಿಪ್ ಗೆ ಮಾನ್ಯತೆ ಇರುವುದಿಲ್ಲ. ರಾಜೀನಾಮೆ ಇತ್ಯರ್ಥಪಡಿಸುವವರೆಗೆ ವಿಧಾನಸಭೆಯ ಯಾವುದೇ ಪ್ರಕ್ರಿಯೆಗಳು ಅತೃಪ್ತರಿಗೆ ಅನ್ವಯವಾಗುವುದಿಲ್ಲ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.