ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.24;

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಬಹು ನಿರೀಕ್ಷಿತ ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ.

ಯೋಜನೆಗೆ ಕೇಂದ್ರ ಒಪ್ಪಿಗೆ ನೀಡಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕಳಸಾ ಬಂಡೂರಿ ನಾಲಾ ಯೋಜನೆ ಪ್ರಾರಂಭಿಸಲು ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿದ್ದು. ಇದರಿಂದ ಯೋಜನೆಯ ಅನುಷ್ಠಾನಕ್ಕೆ ಶೇ.90ರಷ್ಟು ದಾರಿ ಸುಗಮವಾಗಿದೆ. ಪರಿಸರ ಇಲಾಖೆ ನೀಡಿರುವ ಅನುಮತಿ ವಿಚಾರವನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದು ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಳಸಾ ಬಂಡೂರಿ ನಾಲಾ ಯೋಜನೆಯನ್ನು ಆರಂಭಿಸುವ ಕುರಿತು ಪ್ರಧಾನಿ ಮೋದಿ ಭರವಸೆ ನೀಡಿದ್ದರು. ನೀಡಿದ ಆಶ್ವಾಸನೆಯಂತೆ ಇದೀಗ ಕೇಂದ್ರ ಪರಿಸರ ಇಲಾಖೆ ಯೋಜನೆ ಪ್ರಾರಂಭಿಸಲು ಯಾವುದೇ ತಕರಾರು ಇಲ್ಲ ಎಂದು ಹೇಳಿದೆ. ಇದರಿಂದ ಯೋಜನೆಗೆ ಎದುರಾಗಿದ್ದ ತೊಡಕುಗಳು ನಿವಾರಣೆಯಾದಂತಾಗಿದೆ ಎಂದು ತಿಳಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.