ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜು.26;

ಕಳೆದ 14 ತಿಂಗಳಿಂದ ಇದ್ದ ಭ್ರಷ್ಟ ಸರಕಾರ ಪತನವಾಗಿದ್ದು, ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿಗೆ ಬಹುಮತ ಸಿಕ್ಕಿದೆ ಎಂದು ಶಾಸಕ ಶ್ರೀರಾಮುಲು ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ಸ್ವಚ್ಛ, ಪ್ರಾಮಾಣಿಕ ಆಡಳಿತ ನೀಡಲಿದ್ದೇವೆ ಎಂದರು.

40 ವರ್ಷಗಳ ಕಾಲ ರಾಜ್ಯಕ್ಕಾಗಿ ದುಡಿದಿರುವ ಬಿಎಸ್‌ವೈ ಶ್ರಮಕ್ಕೆ ತಕ್ಕ ಫಲ ಸಿಕ್ಕಿದ್ದು, ಅವರು ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡಲಿ ಎಂದು ಹಾರೈಸುವುದಾಗಿ ತಿಳಿಸಿದರು.

ಉಪಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸ್ಥಾನಮಾನಕ್ಕಾಗಿ ದುಡಿಯುವವನಲ್ಲ. ಪಕ್ಷಕ್ಕಾಗಿ ಕೆಲಸ ಮಾಡುವವನು ನಾನು. ಪಕ್ಷದ ಹೈಕಮಾಂಡ್ ಮತ್ತು ದೇವರ ಆರ್ಶಿವಾದ ಇದ್ದರೆ ಡಿಸಿಎಂ ಆಗುತ್ತೇನೆ ಎಂದು ಹೇಳಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.