ಕೆ.ಎನ್.ಪಿ.ವಾರ್ತೆ,ನವದೆಹಲಿ,ಏ.09;
ಪುರುಷರ 105 ಕೆ.ಜಿ. ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಪರ್ದೀಪ್ ಸಿಂಗ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಲಭಿಸಿದ್ದು, ಪುರುಷರ 105 ಕೆ.ಜಿ. ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಪರ್ದೀಪ್ ಸಿಂಗ್ ಬೆಳ್ಳಿ ಪದಕ ಗೆದ್ದಿದ್ದು, 152 ಕೆ.ಜಿ ಹಾಗೂ 200 ಕೆ.ಜಿ. ಸೇರಿದಂತೆ ಒಟ್ಟು 352 ಕೆ.ಜಿ. ಭಾರ ಎತ್ತುವ ಮೂಲಕ ಪರ್ದೀಪ್ ಸಿಂಗ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.