ಕೆ.ಎನ್.ಪಿ.ವಾರ್ತೆ,ಲಖನೌ,ಅ.26;

ಹತ್ಯೆಯಾದ ಕಮಲೇಶ್ ತಿವಾರಿಯವರ ಪತ್ನಿ ಕಿರಣ್ ತಿವಾರಿ ಹಿಂದು ಸಮಾಜ ಪಕ್ಷದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಅ.18ರಂದು ಕಮಲೇಶ್ ತಿವಾರಿಯವರ ಮೇಲೆ ದುಷ್ಕರ್ಮಿಗಳ ಗುಂಪೊಂದು ಗುಂಡಿನ ದಾಳಿ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ತಿವಾರಿಯವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. 

ಹಿಂದು ಸಮಾಜ ಪಕ್ಷದ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಕಿರಣ್ ತಿವಾರಿಯವರು ಶೀಘ್ರದಲ್ಲಿಯೇ ಸುದ್ದಿಗೋಷ್ಟಿ ನಡೆಸಿ ಮಾತನಾಡಲಿದ್ದಾರೆಂದು ಮೂಲಗಳು ತಿಳಿಸಿವೆ. ಸುದ್ದಿಗೋಷ್ಟಿಯಲ್ಲಿ ಪತಿಯ ಹತ್ಯೆ ಪ್ರಕರಣ ಕುರಿತಂತೆ ಕಿರಣ್ ಅವರು ಏನು ಮಾತನಾಡುತ್ತಾರೆಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಇನ್ನು ಕಮಲೇಶ್ ತಿವಾರಿಯವರ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಈ ವರೆಗೂ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.