ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಆ.29;

ಹರಪನಹಳ್ಳಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಲೋಕ ಅದಾಲತ್ ಮತ್ತು ಮದ್ಯಸ್ಥಿಕೆ ಕೇಂದ್ರದ ಮಹತ್ವದ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿರಿಯ ನ್ಯಾಯವಾದಿ ಗಂಗಾಧರ ಗುರು ಮಠ ಮದ್ಯಸ್ಥಿತಿಕೆ ಕಾನೂನು ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕಿರಿಯ ಸಿವಿಲ್ ನ್ಯಾಯಧೀಶರಾದ ಬಿ.ಜಿ. ಶೋಭ, ವಕೀಲರ ಸಂಘದ ಅಧ್ಯಕ್ಷ ರಾಮನಗೌಡ ಪಾಟೇಲ್, ಉಪಾಧ್ಯಕ್ಷರಾದ ಕೆ.ಬಸವರಾಜ, ವಕೀಲರುಗಳಾದ ಬಾಗಳಿ ಮಂಜುನಾಥ, ಡಿ.ಹನುಮಂತ, ಬೆಲೂರು ಸಿದ್ದೇಶ, ವಾಮದೇವ ಕಂಭತ್ತಹಳ್ಳಿ ಸೇರಿದಂತೆ ಇತರರು ಹಾಜರಿದ್ದರು.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.